SearchBrowseAboutContactDonate
Page Preview
Page 222
Loading...
Download File
Download File
Page Text
________________ ಚತುರ್ಥಾಶ್ವಾಸಂ | ೨೧೭ ತೀರ್ಥಂಗಳೊಳಲಾಡುತ್ತುಮಾ ದಿಶಾಭಾಗಮನಾತೀಯ ಶಾಸನಾಯತ್ತು ಮಾಡುತ್ತುಂ ಬಂದಿಂದುಬಿಂಬವಿಗಳದಮೃತಬಿಂದು ದುರ್ದಿನಾರ್ದ ಚಂದನಾನ್ವಿತಮುಮಶಿಶಿರ ಕರ ರಥ ತುರಗ ಖುರ ಶಿಖರ ನಿಖಂಡಿತ ಲವಂಗ ಪಲ್ಲವಮುಮೈರಾವತ ಕರಲೂನ ಸಲ್ಲಕೀ ಶಬಳಮುಮಪ್ಪುದಯಗಿರಿಯಿಂ ಸೊಗಯಿಸುವ ಮೂಡಣ ದೆಸೆಗೆ ಎಂದು ನಂದೆಯ ಪರನಂದಯನಿ ಮಹಾನಂದೆಯೆಂಬ ತೀರ್ಥಜಲಂಗಳೊಳೊಲಾಡುತ್ತುಮುತ್ತ ರಿಪುನೃಪತಿಗಳನೇಸಾಡುತ್ತುಮಲ್ಲಿಂ ತಳರ್ದು ಚವಳ ಕಪಿಬಳ ವಿರುವ ವಿಗಳಿತ ಲತಾಭವನ ಮುಮಧಿಕ ಬಳ ನಳ ಕರತಳಗಳಿತ ಕುಳಶೈಳ ಸಹಸ್ರ ಸಂತಾನ ಕಳಿತ ಸೇತುಬಂಧುರಮುಮಪ್ಪ ದಕ್ಷಿಣ ಸಮುದ್ರದ ತಡಿವಿಡಿದು ಬಂದು ರಾಮಚಂದ್ರಂ ವಿಹರಿಸಿದೆಡೆಗಳಂ ನೋಡಿ 6011 ಅಂದಿದು ಸೀತೆಯೊಳ್ ನೆರೆದು ನಿಂದಡೆ ತತ್ಪರದೂಷಣರ್ಕಳಂ ಕೊಂದೆಡೆ ಪೋಗಿ ಪೊಮ್ಮರೆಯನೆಡೆ ತಪ್ಪದಿದಪ್ಪುದೆಂದು ಕಾ | ಹೈಂ ದಶಕಂಠನಂ ತ್ರಿದಶ ಕಂಟಕನಂ ಕೊಲಲೆಂದು ರಾಮನಾ ದಂದಿನ ಸಾಹಸಂ ಮನದೊಳಾವರಿಸಿತಕಳಂಕರಾಮನಾ || ೧೯ ವ|| ಅಂತು ರಾಮ ಜನೋತ್ಪತ್ತಿಯೊಳಾದ ತನ್ನಯ ಮುನ್ನಿನ ಸಾಹಸಂಗಳಂ ನೆನೆಯುತ್ತುಂ ಬಂದಗಸ್ವತೀರ್ಥಮಂ ಕಂಡು ವಸಿಷ್ಠಪರ್ವತವೆಂಬ ಪವಿತ್ರಕ್ಷೇತ್ರಗಳಲ್ಲಿ ವಿಹರಿಸಿ ಆ ದಿಗ್ಗಾಗ ಪ್ರದೇಶಗಳನ್ನೆಲ್ಲ ತನ್ನ ಆಜ್ಞಾನುವರ್ತಿಗಳನ್ನಾಗಿ ಮಾಡಿಕೊಂಡನು. ಚಂದ್ರಬಿಂಬದಿಂದ ಸ್ರವಿಸುತ್ತಿರುವ ಅಮೃತದ ಹನಿಗಳೆಂಬ ದುರ್ದಿನದಿಂದ ಒದ್ದೆಯಾದ ಶ್ರೀಗಂಧದಿಂದ ಕೂಡಿದುದೂ ಸೂರ್ಯನ ಕುದುರೆಯ ಗೊರಸಿನ ತುದಿಯಿಂದ ಕತ್ತರಿಸಲ್ಪಟ್ಟ ಲವಂಗದ ಬಳ್ಳಿಯ ಚಿಗುರನ್ನುಳ್ಳದ್ದೂ ಐರಾವತವೆಂಬ ಇಂದ್ರನ ಆನೆಯ ಸೊಂಡಲಿನಿಂದ ಮುರಿಯಲ್ಪಟ್ಟ ಆನೆಬೇಲದ ಮರದ ವಿವಿಧ ಬಣ್ಣಗಳಿಂದ ಕೂಡಿದ ಪೂರ್ವದಿಕ್ಕಿಗೆ ಬಂದನು. ನಂದೆ, ಅಪರನಂದೆ, ಅಶ್ವಿನಿ, ಮಹಾನಂದೆಯೆಂಬ ತೀರ್ಥೋದಕಗಳಲ್ಲಿ ವಿಹರಿಸಿ ಪ್ರತಿಭಟಿಸಿದ ರಾಜರುಗಳನ್ನು ಸೋಲಿಸುತ್ತ ಅಲ್ಲಿಂದ ಹೊರಟು ಚಪಳವಾದ ಕಪಿಗಳ ಸಮೂಹದಿಂದ ನಾಶಮಾಡಲ್ಪಟ್ಟ ಬಳ್ಳಿವನೆಗಳಿಂದಲೂ ಅಧಿಕ ಬಳವಂತನಾದ ನಳನು ಸಾವಿರಾರು ಕುಲಪರ್ವತಗಳನ್ನು ಸೇರಿಸಿ ನಿರ್ಮಿಸಿದ ಸೇತುವೆಯಿಂದಲೂ ಅತಿ ರಮಣೀಯವಾದ ದಕ್ಷಿಣಸಮುದ್ರದ ತೀರಪ್ರದೇಶವನ್ನು ಅನುಸರಿಸಿ ಬಂದು (ಹಿಂದೆ) ರಾಮಚಂದ್ರನು ವಿಹರಿಸಿದ ಸ್ಥಳಗಳನ್ನು ನೋಡಿ-೧೯. ಹಿಂದೆ ತ್ರೇತಾಯುಗದಲ್ಲಿ ಸೀತೆಯೊಡನೆ ಸೇರಿ ನಿಂತ ಸ್ಥಳವಿದು, ಆ ಖರದೂಷಣರನ್ನು ಕೊಂದ ಸ್ಥಳವಿದು, ಹೋಗಿ ಚಿನ್ನದ ಜಿಂಕೆಯನ್ನು ಹೊಡೆದ ಸ್ಥಳವಿದು, ಆಗಿರಬೇಕು ಎಂದು ವಿಶೇಷಕೋಪದಿಂದ ದೇವತೆಗಳಿಗೆ ಕಂಟಕನಾಗಿದ್ದ ಆ ಹತ್ತುತಲೆಯ ರಾವಣನನ್ನು ಕೊಲ್ಲಲು ಅವತರಿಸಿದ ರಾಮನ ಅಂದಿನ ಸಾಹಸವು ಅಕಳಂಕರಾಮನಾದ ಅರ್ಜುನನ ಮನಸ್ಸಿನಲ್ಲಿ ಪುನಃ ಅಂಕುರಿಸಿತು ವ|| ರಾಮಾವತಾರದಲ್ಲಾದ ಅಂದಿನ (ತನ್ನ ಹಿಂದಿನ) ಸಾಹಸಗಳನ್ನು ನೆನೆಯುತ್ತ ಬಂದು ಅಗತೀರ್ಥವನ್ನು ಕಂಡನು.
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy