SearchBrowseAboutContactDonate
Page Preview
Page 264
Loading...
Download File
Download File
Page Text
________________ ಪಂಚಮಾಶ್ವಾಸಂ | ೨೫೯ ಕರಿಯ ನೆಯ್ದಿಲ ಕಾವಿನೊಳ್ ಭಾವಿಸಿದ ನೂಪುರಮುಮನದು ಬಿರಿಮುಗುಳಳೊಳ್ ಚಿತ್ರಿಸಿದ ಕರ್ಣಪೂರಮುಮಂ ಬಿಳಿಯ ತಾವರೆಯೆಳಗಾವಿನಸಿಯ ನೂಲೊಳ್ ಕೋದ ತೋರ ಮಲ್ಲಿಗೆಯ ಬಿರಿಮುಗುಳ ಸರಿಗೆಯುಮಂ ಕಪ್ಪುರವಳುಕಿನ ಲಂಬಣಮುಮಂ ತೊಟ್ಟು ಕುಳಿರ್ಕೊ ಚಂದನರಸಮನರ್ದಯೊಳಂ ಮೆಯೊಳಂ ತಳ್ಳಿದು ಕರಿಯ ಕರ್ಬಿನ ಕಾವಿನಳ ಮೈಂದವಾಣಿಯೆಲೆಯ ಬಿಜ್ಜಣಿಗೆಗಳಿಂ ಬೀಸಲ್ವೇಟ್ಟು ತಣ್ಣುಗೆಯೆ ಮನದ ಮೆಯ್ಯ ಸಂತಾಪದೊಳ್ ಬಿಸುಸುಯ್ದು ಬಿಸುಪಿನೊಳನಿತುಮಂ ಗೆಲ್ಲು ಉ ಕೆಂದಳಿರ್ವಾಸು ಸೇಕದ ತೊವಲ್ಗಣೆಯಾಯ್ತು ಮೃಣಾಳ ನಾಳವೊಂ ದೊಂದಡೆವೊತ್ತಿ ಪತ್ತಿದುವು ಸೂಸುವ ಶೀತಳವಾರಿ ಮೈಯ್ಯನ | ಯಂದಿರದತ್ತ ಬತ್ತಿದುವು ತಚ್ಛಶಿಕಾಂತಶಿಳಾತಳಂ ಸಿಡಿ ಲಂದೊಡೆದದೇಂ ಬಿಸಿ. ಬೇಟದ ಬೆಂಕೆ ಮೃಗಾಂಕವಕ್ಕೆಯಾ || ಚott 2 ಅರಿಗನ ಬೇಟದೊಂದೆ ಪೊಸಬೇಟದ ಕೇಸುರಿಯಿಂದಮಯೇ ದ ಳ್ಳುರಿ ನೆಗೆದಂದು ಕೆಂದಳಿರ ಪಾಸುಗಳಿಂ ಕುಳಿರ್ವಾಲಿನೀರ್ಗಳಿಂ | ತುರಿಪದ ಸೂಸುತುಂ ಕೆಳದಿಯರ್ ನದಿಪುತ್ತಿರ ನೋಡ ದಾಹಮೊ ತರಿಸಿದುದೊಂದು ಪೊನ್ನ ಸಲಗಿರ್ಪವೊಲಿರ್ದುದು ಮೆಯ್ ಸುಭದ್ರೆಯಾ ೮ ಕಾವಿನಲ್ಲಿ ಮೇಳಿಸಿದ ಕಾಲಂದಿಗೆಯನ್ನೂ ಧರಿಸಿದಳು. ಅದರ ಬಿರಿದ (ಅರಳಿದ) ಮೊಗ್ಗುಗಳಲ್ಲಿ ಚಿತ್ರಿಸಿದ ಕಿವಿಯ ಅಲಂಕಾರವನ್ನು ಬಿಳಿಯ ತಾವರೆಯ ಎಳೆಯ ದಂಟಿನ ನೂಲಿನಲ್ಲಿ ಪೋಣಿಸಿದ ದಪ್ಪ ಮಲ್ಲಿಗೆಯ ಬಿರಿ ಮುಗುಳಿನ ಅಡಿಕೆಯನ್ನೂ ಕರ್ಪೂರದ ಹಳುಕಿನ ಹಾರವನ್ನೂ ತೊಟ್ಟಳು. ವಿಶೇಷ ತಂಪಾಗಿರುವ ಶ್ರೀಗಂಧದ ರಸವನ್ನು ಶರೀರದಲ್ಲೆಲ್ಲ ಲೇಪಿಸಿಕೊಂಡಳು. ಕರಿಯ ಕಬ್ಬಿನ ಕಾವಿನ ಎಳೆಯದಾದ ಮಹೇಂದ್ರ ಬಾಳೆಯ ಎಲೆಯ ಬೀಸಣಿಗೆಗಳಿಂದ ಬೀಸಹೇಳಿ ತಂಪನ್ನುಂಟುಮಾಡಲು ಮನಸ್ಸಿನ ಮತ್ತು ಶರೀರದ ಸಂತಾಪದಿಂದ ನಿಟ್ಟುಸಿರನ್ನು ಬಿಟ್ಟಳು. ಆ ಶಾಖದಲ್ಲಿ ಅಷ್ಟು ಶೈತ್ಯೋಪಕರಣಗಳನ್ನು ಮೀರಿಸಿ ೭. ಆ ಕೆಂಪು ಚಿಗುರಿನಿಂದ ಮಾಡಿದ ಹಾಸಿಗೆಯು ಬಿಸಿ ನೀರು ಚಿಮುಕಿಸಿದ ಚಿಗುರಿಗೆ ಸಮಾನವಾಯಿತು. ತಾವರೆಯ ದಂಟೊಂದೊಂದು ತಳಹತ್ತಿಕೊಂಡು ಮೈಗೆ ಅಂಟಿಕೊಂಡವು. ಮೇಲೆ ಚೆಲ್ಲಿದ ತಣ್ಣಗಿರುವ ನೀರು ನಿಧಾನವಾಗಿ ಹರಿದು ಎಲ್ಲಿಯೋ ಬತ್ತಿಹೋಯಿತು. ಆ ಚಂದ್ರಕಾಂತ ಶಿಲಾತಳವು ಸಿಡಿದು ಒಡೆದುಹೋಯಿತು. ಆ ಚಂದ್ರವದನೆಯಾದ ಸುಭದ್ರೆಯ ವಿರಹಾಗ್ನಿಯಿದು ಎಷ್ಟು ಬಿಸಿಯಾದುದೋ? ೮. ಅರ್ಜುನನ ಮೇಲಿನ ಪ್ರೇಮದ ಒಂದು ಹೊಸ ಅನುಭವದ ಒಂದು ಕೆಂಪುಜ್ವಾಲೆಯು ಚಿಮ್ಮಿದಾಗ ಅವಳ ಸಖಿಯರು ಕೆಂಪು ಚಿಗುರಿನ ಹಾಸಿಗೆಯಿಂದಲೂ ತಂಪಾಗಿರುವ ಮಂಜಿನ ನೀರಿನಿಂದಲೂ ಆರಿಸಲು ಪ್ರಯತ್ನಿಸಿದರೂ ಎಲ್ಲರೂ ನೋಡುತ್ತಿರುವ ಹಾಗೆಯೇ ಆ ಉರಿಯು ಮತ್ತೂ ಅಭಿವೃದ್ಧಿಯಾಯಿತು. ಸುಭದ್ರೆಯ ಶರೀರವು ಕಾಸಿದ ಚಿನ್ನದ
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy