SearchBrowseAboutContactDonate
Page Preview
Page 272
Loading...
Download File
Download File
Page Text
________________ ಪಂಚಮಾಶ್ವಾಸಂ | ೨೬೭ ಪುನಃಪುನರಾಲಿಂಗನಂಗೆಯ್ದು ಮುಹುರ್ಮುಹುರಾಲೋಕನಂಗೆಯ್ಯುತ್ತುಂ ಬಂದು ದಿವಿಜೇಂದ್ರ ವಿಳಾಸದಿಂ ಪೊಬಲಂ ಪುಗಕಂ ಪರಸುವ ಪುರಜನದ್ದ ವಿದ ಪರಕೆಗಳಂಬುಧಿನಿನಾದಮಂ ಮಿಗೆ ತಮ್ಮ | ಝರುಮೊಡನೆ ಮಣಿದು ಪರಮಾ ನುರಾಗದಿಂ ಬಂದು ಪೊಕ್ಕರಂದರಮನೆಯಂ | ವll ಅಂತು ರಾಜಮಂದಿರಮಂ ಪೊಕ್ಕು ಧರ್ಮಪುತ್ರನನಗಲ್ಲ ಹನ್ನೆರಡು ಮಾಸದೊಳಾದ ದಿಗ್ವಿಜಯ ಪ್ರಪಂಚಮುಮಂ ಸುಭದ್ರಾಹರಣಮುಮಂ ಪುರುಷೋತ್ತಮನ ಪರಮ ಮಿತ್ರತ್ವಮು ಮನಳಿದು ಸಂತಸಂಬಟ್ಟು ತಮ್ಮನಿಬರುಮೇಕಸ್ಥರಾಗಿ ಎರೆದಿಂತಟ್ಟಲವೇ ಕನ್ನ ಬಟಿಯಂ ಬಂದಳ್ ಮರುಳಂಬುಜೋ ದರನಿಂತಟ್ಟಿದನಿಂತು ನೋಂತರೊಳರೇ ಸೈಪಿಂಗೆ ನಾಮಿನ್ನಿಳಾ | ಧರನುಂ ಯಾದವ ವಂಶಜರ್ವೆರಸು ಬರ್ಪಂತಟ್ಟಿ ಮಾಂ ಮನೋ ಹರಮಪ್ಪಂತು ವಿವಾಹಮಂಗಳಮನೆಂದಂದಟ್ಟಿದರ್ ದೂತರಂ || ೨೪ ವ|| ಅಟ್ಟದೂಡವರ್ ಪೋಗಿ ಬಲದೇವನುಮಂ ವಾಸುದೇವನುಮಂ ಕಂಡು ತಮ್ಮ ಬಂದ ಕಜಮನೊಡಂಬಡಿಸಿ ಯಾದವರ್ವರಸು ಮುಂದಿಟ್ಟೋಡಗೊಂಡು ಬರೆ ಬರವನಳಿದು ಪಾಂಡವರಯ್ಯರುಮಿದಿರ್ವೊಗಿ ಯಥೋಚಿತ ಪ್ರತಿಪತ್ತಿಗಳಿಂ ಕಂಡು ಪೊಲೊಡಗೊಂಡು ಬಂದು ಶುಭದಿನ ನಕ್ಷತ್ರ ಯೋಗಕರಣಂಗಳಂ ನಿಟ್ಟಿಸಿ ಮli ಹರಸಿ ಪುನಃ ಪುನಃ ಆಲಿಂಗನಮಾಡಿಕೊಂಡು ಪುನಃಪುನಃ ನೋಡುತ್ತ ದೇವೇಂದ್ರ ವೈಭವದಿಂದ ಪಟ್ಟಣವನ್ನು ಪ್ರವೇಶಿಸಿದನು-೨೩. ಆಗ ಪಟ್ಟಣಿಗರು ಹರಸಿದ ಹರಕೆಗಳು ಸಮುದ್ರಘೋಷವನ್ನು ಮೀರಿರಲು ತಾವಯುಜನರೂ ಅತ್ಯಂತ ಸಂತೋಷದಿಂದ ಅರಮನೆಯನ್ನು ಪ್ರವೇಶಿಸಿದರು. ವlು ಹಾಗೆ ಅರಮನೆಯನ್ನು ಪ್ರವೇಶಿಸಿ ಧರ್ಮರಾಜನನ್ನು ಅಗಲಿಹೋದ ಹನ್ನೆರಡುತಿಂಗಳುಗಳಲ್ಲಿ ನಡೆದ ದಿಗ್ವಿಜಯದ ವಿಷಯವನ್ನೂ ಸುಭದ್ರಾಪಹರಣವನ್ನೂ ಎಲ್ಲರೂ ಕೇಳಿದರು. ಪುರುಷೋತ್ತಮನಾದ ಶ್ರೀಕೃಷ್ಣನ ಉತ್ತಮ ಸ್ನೇಹಸ್ವಭಾವವನ್ನು ತಿಳಿದು ಸಂತೋಷಪಟ್ಟರು. ತಾವೈದು ಜನವೂ ಒಮನಸ್ಸಿನಿಂದ. ೨೪. ನಮಗೆ ದಾನವಾಗಿ ಕೊಡಿ ಎಂದು ದೂತರ ಮೂಲಕ ಪ್ರಾರ್ಥಿಸಿ ಪಡೆಯಬೇಕಾದ ಕನೈಯು ತಾನಾಗಿಯೇ ಜೊತೆಯಲ್ಲಿಯೇ ಬಂದಿದ್ದಾಳೆ. ಕೃಷ್ಣನೇ ಹೀಗೆ ಕಳುಹಿಸಿಕೊಟ್ಟಿದ್ದಾನೆ. ಇಂತಹ ಅದೃಷ್ಟಶಾಲಿಗಳಾದವರು (ವ್ರತ ಮಾಡಿರುವವರು) ಬೇರೆ ಯಾರಿದ್ದಾರೆ. ನಾವು ಇನ್ನು ಯಾದವರೊಡಗೂಡಿ ಕೃಷ್ಣನು ಬರುವ ಹಾಗೆ ದೂತರನ್ನು ಕಳುಹಿಸಿ ಮನೋಹರವಾಗಿರುವ ರೀತಿಯಲ್ಲಿ ಮದುವೆಯ ಮಂಗಳವನ್ನು ಮಾಡೋಣ ಎಂದು ದೂತರನ್ನು ಅಟ್ಟಿದರು. ವ|| ಅವರು ಹೋಗಿ ಬಲರಾಮನನ್ನೂ ವಾಸುದೇವನನ್ನೂ ಕಂಡು ತಾವು ಬಂದ ಕಾರ್ಯಕ್ಕೆ ಅವರು ಒಪ್ಪುವ ಹಾಗೆ ಮಾಡಿ ಯಾದವರೊಡಗೂಡಿ ಅವರನ್ನೇ ಮುಂದುಮಾಡಿಕೊಂಡು ಬಂದರು. ಅವರು ಬರುವುದನ್ನು ತಿಳಿದು ಪಾಂಡವರೈದು ಮಂದಿಯೂ ಅವರಿಗಿದಿರಾಗಿ ಹೋಗಿ ಸೂಕ್ತವಾದ ಸತ್ಕಾರಗಳಿಂದ
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy