SearchBrowseAboutContactDonate
Page Preview
Page 300
Loading...
Download File
Download File
Page Text
________________ | ೯೮ ಪಂಚಮಾಶ್ವಾಸಂ | ೨೯೫ ಕಂ| ಒಂದು ದೆಸೆಯೊಳ್ ತಗುಳ್ಳ ಮು ಕುಂದನ ಕರಚಕ್ರಮೊಂದು ದಸೆಯೊಳ್ ನರನೆ | ಚೊಂದು ಶರವೊಂದು ದೆಸೆಯೊಳ್ ಕುಂದದೆ ದಹನಾರ್ಚಿ ಸುತ್ತಿ ಮುತ್ತುವ ಪದದೊಳ್ || ಶರಣನಗರಿಕೇಸರಿ ಯೆರಡು ಪದಾಂಬುಜಮುಮಾಗಳೆಂಬುದ ಹರಿ ಚಕ್ರ ಕೊಳ್ಳದೆ ನರ ಶರಮುರ್ಚದ ದಹನಶಿಖೆಗಳಳುರದ ಅವನಂ 1 - * ೯೯ ವ|| ಆಗಳ್ ಮಯಂ ವಿಸ್ಮಯಂಬಟ್ಟು ಪೊಡವಟ್ಟು ಪೋದನಾಗಳಾ ವನಾಂತರಾಳದೊಳಿರ್ಪ ತಕ್ಷಕನ ಮಗನಪ್ಪಶ್ವಸೇನನೆಂಬ ಪನ್ನಗಂ ತನ್ನ ತಾಯಂ ತನ್ನ ಬಾಲಮಂ ಕರ್ಚಲ್ಕು ದಹನಾರ್ಚಿಗಳಿಂ ಬರ್ದುಂಕಿ ನೆಗೆದು ಪಾಳುವಾಗಳದನರಂಡಮಪ್ಪಿನಮಾಖಂಡಳ ತನಯನಿಸುವುದುಂ ತನ್ನ ಬಾಲಂಬೆರಸುರಿಯೊಳ್ ಬಿಟ್ಟು ಮಿಡುಮಿಡುಮಿಡುಕುತಿರ್ದ ಜನನಿಯಂ ಕಂಡು ಪಾವುಗಳುಳ್ಳ ಪಗೆಯಂ ಮಳಯವೆಂಬುದು ನನ್ನಿಮಾಡಿಕಂ ಪಗೆ ಸಾಯುವುದುಂ ಕೊಲ್ಲೆಂ ಪಗೆ ಸಾಟಿದ ನಿನ್ನನಾರ ಮಣಿಯಂ ಪೊಕ್ಕಂ | ಪಗೆಯಂ ನೆಂಪನೆ ನೆಪುವ ಬಗೆಯೋಳೆ ಪೊಕ್ಕಂ ಕಡಂಗಿ ಕರ್ಣನ ದೊಣೆಯಂ 11. ೧೦೦ ಬೀಸುತ್ತ ಹೊರಗೆ ಬಂದನು. ಅದಕ್ಕೆ ಅವಕಾಶಕೊಡದೆ-೯೮. ಒಂದು ಕಡೆ ಅಟ್ಟಿಬರುವ ಕೃಷ್ಣನ ಕಯ್ಯ ಸುದರ್ಶನಚಕ್ರವೂ ಮತ್ತೊಂದು ಕಡೆ ಅರ್ಜುನನು ಹೂಡಿದ ಬಾಣವೂ ಬೇರೊಂದೆಡೆಯಲ್ಲಿ ಸ್ವಲ್ಪವೂ ಕಡಿಮೆಯಾಗದ ಉರಿಯ ಜ್ವಾಲೆಯೂ ಸುತ್ತಿ ಮುತ್ತಿದುವು. ೯೯. ತಕ್ಷಣವೇ ಮಯನು 'ಅರಿಕೇಸರಿಯ ಎರಡು ಪಾದಕಮಲಗಳ ನನಗೆ ಶರಣು ಎಂದನು. ಒಡನೆಯೇ ಕೃಷ್ಣನ ಸುದರ್ಶನವು ಪ್ರಯೋಗವಾಗದೆ ನಿಂತಿತು. ಅರ್ಜುನನ ಬಾಣಗಳು ಭೇದಿಸಲಿಲ್ಲ. ಅಗ್ನಿಜ್ವಾಲೆಗಳು ಸುಡಲಿಲ್ಲ. ವ|| ಮಯನು ಆಶ್ಚರ್ಯಪಟ್ಟು ನಮಸ್ಕಾರ ಮಾಡಿ ಹೊರಟು ಹೋದನು. ಆಗ ಆ ಕಾಡಿನ ಮಧ್ಯದಲ್ಲಿದ್ದ ತಕ್ಷಕನ ಮಗನಾದ ಅಶ್ವಸೇನನೆಂಬ ಹಾವು ತನ್ನ ತಾಯಿಯನ್ನು ತನ್ನ ಬಾಲವನ್ನು ಕಚ್ಚಿಕೊಳ್ಳುವಂತೆ ಹೇಳಿ ಬೆಂಕಿಯ ಜ್ವಾಲೆಯಿಂದ ತಪ್ಪಿಸಿಕೊಂಡು ನೆಗೆದು ಹಾರುವಾಗ ಅದನ್ನು ಇಂದ್ರನಂದನನಾದ ಅರ್ಜುನನು ಎರಡುತುಂಡಾಗುವ ಹಾಗೆ ಹೊಡೆದನು. ಬಾಲದೊಡನೆ ಬೆಂಕಿಯಲ್ಲಿ ಬಿದ್ದು ಮಿಡುಮಿಡುಕುತ್ತಿದ್ದ ತನ್ನ ತಾಯಿಯನ್ನು ಕಂಡು ಕೆರಳಿತು. ಹಾವುಗಳು ತಮ್ಮಲ್ಲಿರುವ ದ್ವೇಷವನ್ನು ಮರೆಯುವುದಿಲ್ಲ ಎಂಬುದನ್ನು ಸತ್ಯವನ್ನಾಗಿ ಮಾಡುವಂತೆ ೧೦೦. ತನ್ನ ಶತ್ರುತ್ವವನ್ನು ಸಾರಿ ಹೇಳಲು ಅರ್ಜುನನು ಅದನ್ನು ಕುರಿತು 'ದ್ವೇಷವನ್ನು ಸಾರಿದ ನಿನ್ನನ್ನು ಕೊಲ್ಲುವುದಿಲ್ಲ. ಯಾರ ಆಶ್ರಯವನ್ನಾದರೂ ಪಡೆದು ದ್ವೇಷವನ್ನು ತೀರಿಸು' ಎಂದನು. ಅದನ್ನು ಪೂರೈಸುವ
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy