SearchBrowseAboutContactDonate
Page Preview
Page 464
Loading...
Download File
Download File
Page Text
________________ ದಶಮಾಶ್ವಾಸಂ / ೪೫೯ ಕಂ11 ನಯಮನಯಂ ಜಯಮನಗಪ ಜಯವಿದು ಯಶಮಯಶಮಂಬಿದಂ ಬಗೆಯದೆ ನಿ | ಶಯಿಸಿ ಕಲಹಮನೆ ಮನದೊಳ್ ಭಯಮಯದ ಕಲಿ ಸುಯೋಧನಂ ಪೋಲಮಟ್ಟಂ || ೨೭ ವ|| ಅಂತು ಪೊಆಮಟ್ಟು ಮುಂದೆ ಪರಿವ ಧವಳಚ್ಛತ್ರಚಾಮರಂಗಳುಂ ಮಿಳಿರ್ವ ಪಾಳಿ ಕೇತನಂಗಳುಂ ಪೊಯ್ಯ ಪಂಚಮಹಾಶಬ್ದಂಗಳುಂ ತನಗೆ ರಾಜರಾಜ ಶಬ್ದಮನನ್ವರ್ಥಂ ಮಾಡೆ ಜಯದ್ರಥ ಜಯತೇನ ಸುದಕ್ಷಿಣ ಶಲ್ಯ ಶಕುನಿ ಧೃಷ್ಟಕೇತು ನೀಳ ಭಗದತ್ತ ಶ್ರುತಾಯುಧ ನಿಯತಾಯುಧಾಚ್ಯುತಾಯುಧಾದಿಗಳಪ್ಪ ಪನ್ನೊಂದಕ್ಕೋಹಿಣೀಪತಿಗಳುಂ ಗಾಂಗೇಯ ದ್ರೋಣಾಶ್ವತ್ಥಾಮ ಕೃಪ ಕೃತವರ್ಮ ಪ್ರಕೃತಿಗಳುಂ ಕರ್ಣ ವೃಷಸೇನ ಚಿತ್ರಸೇನರೆಂಬ ತಂದೆ ಮಕ್ಕಳ್ ಮೂವರುಂ ಬೆರಸು ಬರೆ ಬಾಹಿಕ ಭೂರಿಶ್ರವಸೋಮದತ್ತರೆಂಬ ಮೂವರುಮನಂತ ಬಲಂ ಬೆರಸು ಕೂಡಿಬರೆಯವತಿದೇಶಾಧೀಶ್ವರರಷ್ಟ ವಿಂದಾನುವಿಂದರೆಣ್ಣನ್ನು ನಾಲ್ಕಾರ ಮದದಾನೆ ವರಸು ಬಂದು ಕೂಡ ಕಳಿಂಗರಾಜಂ ಕ್ಷೇಮಧೂರ್ತಿಯುಂ ಭೀಮಸೇನನ ಕೆಯ್ಯೋಳ್ ಸತ್ತ ಬಕಾಸುರ ಜಟಾಸುರರ ಮಕ್ಕಳ ಚತುಸ್ಲಿಂಶತೃಹಸ್ತ ನಕ್ತಂಚರ ಪರಿವೃತ ಹಳಂಭೂಷ ಮುಸಲಾಯುಧ ಕಾಳನೀಳ ವಿದ್ಯುನ್ಮಾಲ್ಯಾದಿಗಳುಂ ಬಂದು ಕೂಡ ತಿಗರ್ತಾಧೀಶಂ ಸುಶರ್ಮನು ಸಂಸಪಕರ್ ಪದಿನೆಂಟು ಕೋಟಿ ರಥಂ ಬೆರಸು ಬಂದು ಕೂಡ ಮತ್ತಮನೇಕ ದೇಶಾಧೀಶ್ವರರುಂ ೨೭. ಇದು ನೀತಿ ಇದು ಅನೀತಿ, ಇದು ಜಯ ಇದು ಅಪಜಯ, ಇದು ಯಶಸ್ಸು ಇದು ಅಪಯಶಸ್ಸು ಎಂದು ವಿಚಾರಮಾಡದೆ ಯುದ್ಧವನ್ನೇ ಮನಸ್ಸಿನಲ್ಲಿ ನಿಷ್ಕರ್ಷಿಸಿ ಭಯವೆಂದರೇನೆಂಬುದನ್ನೇ ತಿಳಿಯದ ಶೂರನಾದ ದುರ್ಯೋಧನನು ಯುದ್ದಕ್ಕೆ ಹೊರಟನು. ವ|| ಹಾಗೆ ಹೊರಟು ತನ್ನ ಮುಂದೆ ನಡೆಯುತ್ತಿದ್ದ ಶ್ವೇತಚ್ಛತ್ರಚಾಮರಗಳೂ ಅಲುಗಾಡುತ್ತಿದ್ದ ಕೊಂಬು, ತಮಟೆ, ಭೇರಿ, ಘಂಟೆ ಮತ್ತು ಚಿನ್ನಂಗಹಳಗಳೆಂಬ ಪಂಚಮಹಾವಾದ್ಯಗಳೂ ತನ್ನ ಚಕ್ರವರ್ತಿ ಎಂಬ ಶಬ್ದವನ್ನು ಅನ್ವರ್ಥವಾಗಿ ಮಾಡುತ್ತಿದ್ದವು. ಜಯದ್ರಥ, ಜಯನ, ಸುದಕ್ಷಿಣ, ಶಲ್ಯ, ಶಕುನಿ, ಧೃಷ್ಟಕೇತು, ನೀಳ, ಭಗದತ್ತ, ಶ್ರುತಾಯುಧ, ನಿಯತಾಯುಧ, ಅಚ್ಯುತಾಯುಧರೇ ಮೊದಲಾದ ಹನ್ನೊಂದಕ್ಟೋಹಿಣೀ ನಾಯಕರೂ ಭೀಷ್ಮ ದ್ರೋಣ, ಅಶ್ವತ್ಥಾಮ, ಕೃಪ, ಕೃತವರ್ಮ ಮೊದಲಾದವರೂ ಕರ್ಣ, ವೃಷಸೇನ ಚಿತ್ರಸೇನರೆಂಬ ತಂದೆ ಮಕ್ಕಳು ಮೂವರೂ ಒಟ್ಟುಗೂಡಿ ಬಂದರು. ಬಾಸ್ತಿಕ ಭೂರಿಶ್ರವ ಸೋಮದತ್ತರೆಂಬ ಮೂವರೂ ಕಡೆಯಿಲ್ಲದಷ್ಟು ಸೇನಾಸಮೇತರಾಗಿ ಬಂದು ಸೇರಿದರು. ಅವಂತೀದೇಶದ ಒಡೆಯರಾದ ವಿಂದಾನುವಿಂದರು ಎಂಬತ್ತುನಾಲ್ಕು ಸಾವಿರ ಮದ್ದಾನೆಯೊಡಗೂಡಿ ಬಂದು ಕೂಡಿದರು. ಕಳಿಂಗ ರಾಜನಾದ ಕ್ಷೇಮಧೂರ್ತಿಯೂ ಭೀಮಸೇನನ ಕಯ್ಯಲ್ಲಿ ಸತ್ತ ಬಕಾಸುರ ಜಟಾಸುರರ ಮಕ್ಕಳಾದ ಹಳಂಭೂಷ ಮುಸಲಾಯುಧ ಕಾಳ ನೀಳ ವಿದ್ಯುನ್ಮಾಲಿ ಮೊದಲಾದವರೂ ಮೂವತ್ತುನಾಲ್ಕುಸಾವಿರ ರಾಕ್ಷಸರಿಂದ ಸುತ್ತುವರಿಯಲ್ಪಟ್ಟು ಬಂದು ಜೊತೆಗೂಡಿದರು. ತ್ರಿಗರ್ತಾಧೀಶ್ವರನಾದ ಸುಶರ್ಮನೂ ಸಂಶಪ್ತಕರೂ ಹದಿನೆಂಟು ಕೋಟಿ ತೇರಿನೊಡನೆ ಬಂದು ನೆರೆದರು. ಇನ್ನೂ ಅನೇಕ ದೇಶಾಧೀಶರು ಬಂದು ಒಟ್ಟುಗೂಡಿದರು. ಯುಯುತ್ಸು, ದುಶ್ಯಾಸನ, ಚಿತ್ರಸೇನ, - 30
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy