SearchBrowseAboutContactDonate
Page Preview
Page 471
Loading...
Download File
Download File
Page Text
________________ ೪೬೬ / ಪಂಪಭಾರತಂ ವ|| ಅಂತು ನುಡಿದೆರಡುಂ ಬಲಂಗಳುಂ ತಂತಮ್ಮ ವೀರಮಂ ಚಾಗಮಂ ಮೆದು ತಮ್ಮ ಕೆಯ್ದುಗಳನರ್ಚಿಸಿ ದರ್ಭಶಯನಂ ಮಾಡಿ ಪಲ್ಲಂ ಸುಲಿದು ಶಸ್ತ್ರಸಂಗ್ರಹರಾಗಿ ಪಲರುಂ ವೀರಭಟರ್ ತಮ್ಮಂ ತಾಮ ಪರಿಚ್ಛೇದಿಸಿರ್ದರು ಮತ್ತಮೊರ್ವಂ ತನ್ನ ನಲ್ಲಳಿಂತೆಂದನೀ ಪೊ ಪೊತ್ತು ನಾಳೆ ದೇವಲೋಕದ ಕನ್ನಕೆಯರೋಲಗದೊಳಿರ್ಪನೆಂದು ನುಡಿಯೆ ನೀನೆಂದಂತು ಪೋಗಲ್ ತೀರದು ನಾಳೆ ಮಗುಟ್ಟು ಬಂದೆನ್ನೊಳ್ ನೆರೆವೆಯೆಂದು ಪೇಟೆ ನಿನಗಳವುಂಟೆ ಎಂದು ಕೇಳೆಯನ್ನೋಲೆವಾಗ್ಯಮುಂಟೆಂದಳ ಮತ್ತವೊಂದೆಡೆಯೊಳೊರ್ವಳ್ ದರ್ಭಶಯನಸ್ಥನಾದ ನಿಜಪ್ರಾಣೇಶ್ವರನ ಪರಿಚ್ಛೇದಮನಂದು ತನ್ನ ಸಾವಂ ಪರಿಚ್ಛೇದಿಸಿ 611 ತಾಂ ಗಡ ನಾಳೆ ಪೋಗಿ ದಿವಿಜಾಂಗನೆಯೊಳ್ ತೊಡದಿರ್ಪನಲ್ಲಿ ಮಾ ಸ್ಟಾಂ ಗಡಮಿರ್ಪೆನಂತನಿತು ಬೆಳ್ಳಿಗೆ ಮುನ್ನಮೆ ಪೋಗಿ ನಲೆಗೆ | ಅಂಗೊಳೆ ದೇವಲೋಕದೊಳಧೀಶನನಾನಿದಿರ್ಗೊಳ್ಳೆನೋವೂ ಸ ಗಂಗಳೊಳಿರ್ಪ ದೇವಡಿತಿ ತೊರೊಳಯನಾಗಲೀವನೇ || ೪೫ ವ|| ಎಂದು ಕೈದವಮಿಲ್ಲದ ನಲೆಯಂ ನಾಲಗೆಯ ತುದಿಗೆ ತಂದು ನುಡಿದಳ ಮತ್ತೋರ್ವಳ್ ತನ್ನಾಣನ ದೋರ್ವಲದಗುರ್ವ೦ ನೆಚ್ಚಿ ಗುರಿಯಿಟ್ಟು ಹೊಡೆದು ತನ್ನ ಸ್ವಾಮಿಯು ವಿಶೇಷವಾಗಿ ಮೆಚ್ಚುವಂತೆ ಗೆದ್ದವನು ಅಪಾರವಾದ ಐಶ್ವರ್ಯವನ್ನು ಪಡೆಯುತ್ತಾನೆ. ದೇವಸ್ತ್ರೀಯರ ಸಮೂಹವು ಸಂತೋಷದಿಂದ ಸ್ವಾಗತಿಸುತ್ತದೆ. ಇವೆರಡೂ ಸುಭಟನಿಗೆ ಸಂತೋಷಕರವಾದುದೇ. ಹೀಗಿರುವುದನ್ನು ತಿಳಿದೂ ಹೆದರುವವನು ಏಕೆ ಹೆದರುತ್ತಾನೆ ಎಂದು ಮತ್ತೊಬ್ಬನು ಆ ರಾಜಸಭೆಯಲ್ಲಿ ಉಬ್ಬಿ ಹೇಳಿದನು. ವ| ಹೀಗೆ ಮಾತನಾಡಿ ಎರಡು ಸೈನ್ಯದವರೂ ತಮ್ಮ ತಮ್ಮ ವೀರವನ್ನೂ ತ್ಯಾಗವನ್ನೂ ಪ್ರದರ್ಶಿಸಿ ತಮ್ಮ ಆಯುಧಗಳನ್ನು ಪೂಜಿಸಿ ದರ್ಭೆಯ ಮೇಲೆ ಮಲಗಿ, ಹಲ್ಲನ್ನು ತೊಳೆದು ಶಸ್ತ್ರಧಾರಿಗಳಾಗಿ ಅನೇಕ ವೀರಭಟರು ತಮ್ಮ ವಿಷಯವನ್ನು ತಾವೇ ನಿಶ್ಚಯಿಸಿದರು. ಆ ಕಡೆ ಮತ್ತೊಬ್ಬನು ತನ್ನ ಪ್ರಿಯಳೊಡನೆ ಹೀಗೆಂದನು. ಈ ಹೊತ್ತೇ ಹೊತ್ತು. ನಾಳೆ ದೇವಲೋಕದ ಸ್ತ್ರೀಯರಲ್ಲಿ ಸಂತೋಷದಿಂದಿರುತ್ತೇನೆ ಎಂದು ಹೇಳಿದನು. ಅವಳು “ನೀನು ಹೇಳಿದ ಹಾಗೆ ಹೋಗುವುದು ಸಾಧ್ಯವಿಲ್ಲ. ನಾಳೆ ಪುನಃ ನೀನು ಬಂದು ನನ್ನಲ್ಲಿ ಸೇರುತ್ತೀಯ' ಎಂದಳು. “ಅದು ನಿನಗೆ ಹೇಗೆ ಗೊತ್ತು' ಎಂದು ಪ್ರಶ್ನಿಸಿದನು. ಅವಳು 'ನನ್ನ ಓಲೆಭಾಗ್ಯವುಂಟು' ಎಂದಳು. ಬೇರೊಂದು ಕಡೆಯಲ್ಲಿ ಒಬ್ಬಳು ದರ್ಭೆಯ ಹಾಸಿಗೆ ಯಲ್ಲಿದ್ದ ತನ್ನ ಪತಿಯ ನಿಶ್ಚಯವನ್ನು ತಿಳಿದು ತನ್ನ ಸಾವನ್ನು ನಿಷ್ಕರ್ಷಿಸಿ ೪೫. ನನ್ನ ಪತಿಯು ನಾಳೆ ಹೋಗಿ ದೇವತಾಸ್ತ್ರೀಯರಲ್ಲಿ ಸೇರಿರುತ್ತಾನೆ, ಇಲ್ಲಿ ನಾನು ಮಾತ್ರ ಇರುತ್ತೇನಲ್ಲವೆ? ಅಷ್ಟು ದಡ್ಡಳೇ ನಾನು! ಮೊದಲೇ ಹೋಗಿ ನನ್ನ ಸದ್ಗುಣವು ಪ್ರಕಾಶವಾಗುವ ಹಾಗೆ ದೇವಲೋಕದಲ್ಲಿ ನನ್ನ ಪತಿಯನ್ನು ಇದಿರುಗೊಳ್ಳುತ್ತೇನೆ. ಓಹೋ ಸ್ವರ್ಗದಲ್ಲಿರುವ ದೇವಸ್ತ್ರೀಯರೆಂಬ ದಾಸಿಯರಲ್ಲಿ (ನನ್ನ ಪತಿಯು) ಪ್ರೀತಿಸುವುದಕ್ಕೆ ಅವಕಾಶ ಕೊಡುತ್ತೇನೆಯೇ? ವ|| ಎಂದು ಕಪಟವಿಲ್ಲದ ತನ್ನ ಪ್ರೇಮವನ್ನು ನಾಲಗೆಯ ತುದಿಗೆ ತಂದು ಸ್ಪಷ್ಟವಾಗಿ ಹೇಳಿದಳು. ಮತ್ತೊಬ್ಬಳು ತನ್ನ
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy