SearchBrowseAboutContactDonate
Page Preview
Page 475
Loading...
Download File
Download File
Page Text
________________ ೪೭೦ / ಪಂಪಭಾರತಂ ಚಂ ಜಲಶಯನೋದರಾಂತರದಿನೀ ತ್ರಿಜಗಂ ಪೊಱಮಟ್ಟುದೀಗಳೆಂ ಬುಲಿ ಸಲೆ ತಮ್ಮ ತಮ್ಮ ಶಿಬಿರಂಗಳಿನುಗ್ರ ಚತುರ್ಬಲಂಗಳಂ | ಪಲವುಮನೊಂದೆ ಮಾಡಿ ದೆಸೆಗಳ ಮಸುಳ ನಡೆತಂದರಾಜಿಗಿ ರ್ವಲದಲರಾತಿನಾಯಕರುಮೊರ್ಬರನೊರ್ಬರ ಗಲ್ವ ತಕ್ಕಿನೊಳ್ ||೫೨ ವ|| ಆಗಳ್ ಕೌರವಬಲದ ಸೇನಾನಾಯಕಂ ಗಾಂಗೇಯನಡ್ಡಮಾಗೆ ತನ್ನೊಡ್ಡಿದ ಮಕರವ್ಯೂಹದ ಮೊನೆಯೊಳ್ ಸುತ್ತಿದೆತ್ತಿದ ಪೊನ್ನ ತೊಳಪ ಪಡೆಯಿಗೆಗಳುಂ ಮೆಜ ಬೆಳ್ಳಿಯ ರಥಮುಮಾ ರಥದೊಳೊಡಂಬಡೆ ಹೂಡಿದ ಕುದುರೆಗಳುಂ ಜೋಲ್ಲ ಪುರ್ವನ ಕಟ್ಟಿದ ಲಲಾಟಪಟ್ಟದೊಳಿಟ್ಟಳನೊಪ್ಪುವ ಬೀರವಟ್ಟಮುಮಸದಳಮಸೆಯ ದಿವ್ಯಕವಚಮಂ ತೊಟ್ಟು ಪರಶುರಾಮಂ ಬಾಂದು ಪ್ರಚಂಡ ಕೋದಂಡಮಂ ಕೊಂಡು ಪಾಂಡವಬಲಮಂ ಮಾರ್ಕೊಂಡು ನಿಂದಾಗಳ್ ಶ್ವೇತನುಮಾ ವ್ಯೂಹಕ್ಕೆ ಪ್ರತಿವ್ಯೂಹವಾಗಿ ಸೂಚೀವ್ಯೂಹಮನೊಡ್ಡಿ ಕನಕಕವಚಾಲಂಕೃತ ಶರೀರನುಮಾರೂಢ ಸಮರ ರಸನುಮುಪಾರೂಢ ಕನಕರಥನುವಾಗಿ ಕೈಲಾಸವಾಸಿಗೆ ಪೊಡೆವಟ್ಟು ಬಿಲ್ಲಂ ಕೊಂಡು ಗಂಗಾಸುತಂಗದಿರದಿದಿರ್ಚಿ ನಿಂದಾಗಳ್ ಕಂ|| ಶ್ವೇತನ ಗಂಗಾಜಾತನ ಮಾತನೆ ಪಾರ್ದರಡುಮೊಡ್ಡಣಂ ಕಾದಂ | ದೀ ತಂದಿನೊಡ್ಡಿ ನಿಂದುವು ಭೂತಳಮಳ್ಳಾಡ ಕೆಸು ಕಡಿತದ ತದಿಂ || 982 ಸೇರಿರಲು ಅವು ಚಿತ್ರದಲ್ಲಿ ಬರೆದ ಹಾಗೆ ಕಂಡವು. ೫೨. ವಿಷ್ಣುವಿನ ಗರ್ಭದಿಂದ ಈಗ ಮೂರುಲೋಕಗಳೂ ಹೊರಹೊರಟವು ಎಂಬ ಮಾತು ಸಲ್ಲುತ್ತಿರಲು ದಿಕ್ಕುಗಳು ಕಾಂತಿಹೀನವಾಗುತ್ತಿರಲು ಎರಡು ಸೈನ್ಯದ ಶತ್ರುನಾಯಕರೂ ಒಬ್ಬರನ್ನೊಬ್ಬರು ಗೆಲ್ಲುವ ಸಾಮರ್ಥ್ಯದಿಂದ ಯುದ್ಧಕ್ಕೆ ನಡೆದು ಬಂದರು. ವ! ಆಗ ಕೌರವ ಸೈನ್ಯದ ನಾಯಕನಾದ ಭೀಷ್ಮನು ತಾನು ಅಡ್ಡಲಾಗಿ ಮೊಸಳೆಯ ಆಕಾರದ ಸೈನ್ಯರಚನೆಯನ್ನು ಒಡ್ಡಿದನು. ಅದರ ಮುಂಭಾಗದಲ್ಲಿ ಸುತ್ತಲೂ ಎತ್ತಿ ಕಟ್ಟಿರುವ ಪ್ರಕಾಶಮಾನವಾದ ಚಿನ್ನದ ಬಾವುಟಗಳೂ ಶೋಭಾಯಮಾನವಾಗಿರುವ ಬೆಳ್ಳಿಯ ತೇರು, ಆ ರಥಕ್ಕೆ ಹೊಂದಿಕೊಳ್ಳುವ ಹಾಗೆ ಹೂಡಿರುವ ಕುದುರೆಗಳು ಸಿದ್ಧವಾಗಿದ್ದುವು. ಜೋತು ಹೋಗಿರುವ ಹುಬ್ಬನ್ನು ಎತ್ತಿ ಕಟ್ಟಿರುವ ಹಣೆಯಲ್ಲಿ ಸೊಗಸಾಗಿ ಪ್ರಕಾಶಿಸುತ್ತಿರುವ ವೀರಪಟ್ಟವು ಅತಿಶಯವಾಗಿ ಮೆರೆಯುತ್ತಿರಲು ದಿವ್ಯವಾದ ಕವಚವನ್ನು ತೊಟ್ಟು 'ಪರಶುರಾಮನು ಬಾಳಲಿ' ಎಂದು ತನ್ನ ಆಚಾರ್ಯನನ್ನು ನೆನೆದನು. ಭಯಂಕರವಾದ ಬಿಲ್ಲನ್ನು ಹಿಡಿದು ಪಾಂಡವಸೈನ್ಯವನ್ನು ಪ್ರತಿಭಟಿಸಿ ನಿಂತನು. ಈ ಕಡೆ ಶ್ವೇತನೂ ಆ ಮಕರವ್ಯೂಹಕ್ಕೆ ಪ್ರತಿಯಾಗಿ ಸೂಜಿಯ ಆಕಾರದ ಸೇನಾರಚನೆಯನ್ನು ಒಡ್ಡಿದನು. ಚಿನ್ನದ ಕವಚದಿಂದ ಅಲಂಕೃತವಾದ ಶರೀರವುಳ್ಳವನೂ ಯುದ್ಧೋತ್ಸಾಹದಿಂದ ಕೂಡಿದವನೂ ಆಗಿ ಕೈಲಾಸವಾಸಿಯಾದ ಈಶ್ವರನಿಗೆ ನಮಸ್ಕರಿಸಿ ಬಿಲ್ಲನ್ನು ಹಿಡಿದು ಭೀಷ್ಮನಿಗೆ ಹೆದರದೆ ಎದುರಿಸಿ ನಿಂತನು. ೫೩. ಶ್ವೇತ ಮತ್ತು ಭೀಷ್ಮರ ಆಜ್ಞೆಯನ್ನೇ ನಿರೀಕ್ಷಿಸುತ್ತ ಎರಡು ಸೈನ್ಯವೂ ಯುದ್ಧ ಮಾಡುವುದಕ್ಕಾಗಿ ಈ ರೀತಿಯಲ್ಲಿ ನಿಂತಿರಲು
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy