SearchBrowseAboutContactDonate
Page Preview
Page 477
Loading...
Download File
Download File
Page Text
________________ ೫೭ ೪೭೨) ಪಂಪಭಾರತಂ . ಕ೦ll ಕತೆ ಕೊರಳೊಳ್ ಕಣೋಸಲೋಳ್ ಪ ಮಕುಟದೋಳುಗಧನು ಕರಾಗ್ರದೊಳಿರೆಯ | ಇತಿಯ ಹರಿಕೇತು ನಭದೋಲ್ ಮಿಜುಗುವ ಚೆಂಬೊನ್ನ ರಥದನಶ್ವತ್ಥಾಮಂ || ವ|| ಆ ರುದ್ರಾವತಾರನ ಕೆಲದೊಳ್ ಕಿಕ್ಕಿಳಿಗಿಳಿದ ತಂದುಜುಗಲ ನಡುವೆ ಪೊನ್ನ ರಥಮನೇ ನಿಂದಂ ಭೂರಿಶ್ರವನಾತನ ಕೆಲದೊಳ್ ಬಾಳಬಟ್ಟಂ ತೂಂತಿಟ್ಟಂತ ಸಂದಣಿಸಿ ನಿಂದ ಗೋಪಕುಮಾರರಣಿಯ ನಡುವೆ ಪೊನ್ನ ರಥಮನೇ ನಿಂದಾತನನ್ನ ತಮ್ಮ ಕೃತವರ್ಮನಾತನ ಕೆಲದೊಳೊಂದಕ್ಕೋಹಿಣೀ ಬಲಂಬೆರಸು ಸುತ್ತಿಳೆದು ಕನಕ ದಂಡ ಮಂಡಿತ ವಿಚಿತ್ರಾತಪತ್ರಗಳ ನಡುವೆ ಮಣಿಮಕುಟ ಮರೀಚಿಗಳ ಪೊಳೆಯ ನಾನಾ ವಾಹನಂಗಳನೇ ನಿಂದ‌ ಜಯತ್ತೇನ ಕಾಂಭೋಜ ಸುದಕ್ಷಿಣ ದಂಡಧಾರ ಶತದಂಡಧರರವರ ಕೆಲದೊಳ ನೀಳ ಶ್ರುತಾಯುಧ ನಿಯುತಾಯುಧಾಚ್ಯುತಾಯುಧರೆಂಬರವರ ಕೆಲದೊಳ್ ನಿಲೆ ಬಲದ ಸೆಲೆಕೊಲೊಳೊಂದ ಕ್ಷೌಹಿಣಿಬಲಂಬೆರಸುಮತ್ತುಸಾಸಿರ ಮದದಾನವರಸು ನಿಂದಂ ಸುಯೋಧನನಣುಗ ಮಯ್ತುನಂ ಸಿಂಧುದೇಶಾಧೀಶ್ವರಂ ಜಯದ್ರಥನಾತನ ಕೆಲದೊಳ್ ಮಕರಮಸ್ತಕಭೂಮಿಯೊಳ್ ಕರಟತಟಗಳಿತ ಮದಜಳಧಾರಾಪೂರ ಪರಿಸ್ಲಾವಿತ ಸಕಳ ಭೂತಳಮಪ್ಪ ನಾಲ್ಕು ಲಕ್ಕ ಭದ್ರಹಸ್ತಿಯುಮನೊಂದು ಮಾಡಿ ಘಟೆಯ ಮೊನೆಯೊಳ್ ದಿಗ್ಗಜೇಂದ್ರಮನಿಸಿದ ಸುಪ್ರತೀಕ ರಥದಲ್ಲಿ ರಾಶಿ ಹಾಕಿದ ಆಯುಧಗಳ ಬೆಳಕೇ ಬೆಳಕಾಗಿರಲು ೫೭. ಕತ್ತಿನಲ್ಲಿ ಕರಿಯ ಮಚ್ಚೆ ಹಣೆಯಲ್ಲಿ ಕಣ್ಣು ಕಿರೀಟದ ತುದಿಯಲ್ಲಿ ಚಂದ್ರ ಕೈಯ್ಯಲ್ಲಿ ಉಗ್ರವಾದ ಬಿಲ್ಲು ಇವುಗಳಿಂದ ಕೂಡಿ ಆಕಾಶದಲ್ಲಿ ಸಿಂಹದ್ವಜವು ಮಿಡುಕುತ್ತಿರುವ ಪ್ರಕಾಶವಾದ ಹೊಂಬಣ್ಣದ ತೇರಿನಲ್ಲಿರುವವನು ಅಶ್ವತ್ಥಾಮ: ವ|| ಆ ರುದ್ರಾವತಾರನ ಪಕ್ಕದಲ್ಲಿ ಒಟ್ಟಾಗಿ ಸೇರಿಕೊಂಡಿರುವ ಛತ್ರಿಗಳ ಸಮೂಹದ ಮಧ್ಯದಲ್ಲಿ ಚಿನ್ನದ ರಥವನ್ನು ಹತ್ತಿ ನಿಂತಿರುವವನು ಭೂರಿಶ್ರವ; ಆತನ ಪಕ್ಕದಲ್ಲಿ ಆಕಾಶ ಪ್ರದೇಶವನ್ನು ತೂತುಮಾಡಿದ ಹಾಗೆ ಗುಂಪುಗೂಡಿಸಿ ನಿಂತಿರುವ ಗೋಪಕುಮಾರರ ಸೈನ್ಯದ ನಡುವೆ ಚಿನ್ನದ ತೇರನ್ನು ಹತ್ತಿ ನಿಂತಿರುವವನು ನನ್ನ ತಮ್ಮನಾದ ಕೃತವರ್ಮ, ಆತನ ಪಕ್ಕದಲ್ಲಿ ಒಂದಕ್ಟೋಹಿಣಿ ಸೈನ್ಯದಿಂದ ಕೂಡಿ ಸುತ್ತಲೂ ವ್ಯಾಪಿಸಿ ಚಿನ್ನದ ದಂಡಿಗೆಯಿಂದಲಂಕೃತವಾದ ಚಿತ್ರಖಚಿತವಾದ ಛತ್ರಿಗಳ ನಡುವೆ ರತ್ನಖಚಿತವಾದ ಕಿರೀಟವು ಹೊಳೆಯುವ ಹಾಗೆ ಅನೇಕ ವಿಧವಾದ ವಾಹನಗಳನ್ನು ಹತ್ತಿ ನಿಂತಿರುವವರು ಜಯತ್ತೇನ, ಕಾಂಭೋಜ, ಸುದಕ್ಷಿಣ, ದಂಡಧಾರ, ಶತದಂಡಧರರು. ಅವರ ಪಕ್ಕದಲ್ಲಿ ಬಲದಂಚಿನಲ್ಲಿ ಒಂದಕ್ಟೋಹಿಣಿ ಸೈನ್ಯದಿಂದಲೂ ಐವ್ವತ್ತು ಸಾವಿರ ಮದ್ದಾನೆಯಿಂದಲೂ ಕೂಡಿ ನಿಂತಿರುವವನು ದುರ್ಯೊಧನನ ಪ್ರೀತಿಯ ಮೈದುನನೂ ಸಿಂಧುದೇಶಾಧೀಶ್ವರನೂ ಆದ ಜಯದ್ರಥ. ಆತನ ಪಕ್ಕದಲ್ಲಿ ಮಕರವ್ಯೂಹದ ಮುಂಭಾಗದಲ್ಲಿ ಕಪೋಲಪ್ರದೇಶದಿಂದ ಧಾರಾಕಾರವಾಗಿ ಹರಿಯುತ್ತಿರುವ ಮದೋದಕದಿಂದ ತೊಳೆಯಲ್ಪಟ್ಟ ಭೂಮಿಯನ್ನುಳ್ಳ ನಾಲ್ಕು ಲಕ್ಷ ಭದ್ರಜಾತಿಯ ಆನೆಗಳನ್ನು ಒಟ್ಟುಗೂಡಿಸಿಕೊಂಡು ಅವುಗಳ ಮುಂಭಾಗದಲ್ಲಿ ದಿಗ್ಗಜವೆಂದು
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy