SearchBrowseAboutContactDonate
Page Preview
Page 478
Loading...
Download File
Download File
Page Text
________________ ದಶಮಾಶ್ವಾಸಂ / ೪೭೩ ಗಜೇಂದ್ರಮನೇ ನಿಂದಾತನಿಂದ್ರನ ಕಳೆಯಂ ಭಗದತ್ತನಾತನ ಕೆಲದೊಳೊಂದು ಲಕ್ಕ ಕುದುರೆಯುಮಗುವತ್ತು ಸಾಸಿರ ರಥಮುಮೊಂದಕ್ಕೋಹಿಣಿಯ ಕಾಲಾಳ್ವರಸು ನಿಂದರ್ ಸೋಮದತ್ತ ಬಾಹೀಕರವರ ಕೆಲದೊಳ್ ದೇವೇಂದ್ರಂಗೆ ಪಗೆವರಾಗಿ ವಿಕ್ರಮಾರ್ಜುನನ ಕೆಯ್ಯೋಳ್ ಸತ್ತ ನಿವಾತಕವಚ ಕಾಳಕೇಯ ಪೌಲೋಮ ತಳತಾಳುಕರೆಂಬ ದೈತ್ಯರ್‌ ವೃದ್ಧ ವೈರಮಂ ನೆರೆದು ತ್ರಿಗರ್ತಾಧೀಶ ಸುಶರ್ಮ ಪ್ರಕೃತಿಗಳುಂ ಸಂಸಪಕರುಮಾಗಿ ಪುಟ್ಟ ಮೂರು ಕೋಟಿಯುಮಜುವತ್ತು ಸಾಸಿರ ದೈತ್ಯಪ್ರಧಾನನಾಯಕರುಮರ್ಜುನನೊಳ್ ಕಾದುವ ಬೆಸನಂ ದುರ್ಯೋಧನನೋಳ್ ಬೇಡಿ ಪಡೆದು ಹದಿನೆಂಟು ಕೋಟಿ ರಥಂಬೆರಸ ಬೇಡಿ ನಿಂದರ್ ಮತ್ತಿತ್ತ ಚತುರಂಗಬಳಜಳನಿಧಿಯ ನಡುವೆ ಕಳಿಂಗರಾಜ ವಂಗ ಕೊಂಗ ದೇಶಾಧೀಶ್ವರ ರೆತುಸಾಸಿರ ಗಜಘಟೆಗಳುಂ ಮೂಜುಲಕ್ಕ ರಥಮುಮುವತ್ತು ಕೋಟಿ ಪದಾತಿಯುಂ ಬೆರಸು ನಿಂದರ್ ಮತ್ತು ಕ್ಷೇಮಧೂರ್ತಿಯುಂ ಭೀಮಸೇನನ ಕೆಯೊಳ್ ಸತ್ತ ಬಕಾಸುರ ಜಟಾಸುರರನ ಮಕ್ಕಳಳಂಭೂಷ ಹಲಾಯುಧ ಮುಸಲಾಯುಧ ಕಾಳ ನೀಳ ಪ್ರಮುಖ ರೂಕ್ಷರಾಕ್ಷಸ ಬಲಂಬೆರಸು ಸುತ್ತಿಳೆದು ಬಳಸಿಯುಮಿರೆ ದುಶ್ಯಾಸನಂ ಮೊದಲಾಗೆ ನೂರ್ವರ್ ತಮ್ಮಂದಿರುಂ ಲಕ್ಕಣಂ ಮೊದಲಾಗೆ ನೂರ್ವರ್ ಮಕ್ಕಳುಮುವತ್ತು ಸಾಸಿರ ರಥಮುಂ ಹದಿನೆಂಟು ಸಾಸಿರ ಮದಾಂಧಗಂಧಸಿಂಧುರಂಗಳುಂ ಬೆರಸು ಪೊಯ್ದ ಪಂಚಮಹಾಶಬ್ದಂಗಲ್ ಪ್ರಸಿದ್ದಿಗೊಂಡಿರುವ ಸುಪ್ರತೀಕವೆಂಬ ಆನೆಯನ್ನು ಹತ್ತಿ ನಿಂತಿರುವವನು ಇಂದ್ರನ ಸ್ನೇಹಿತನಾದ ಭಗದತ್ತ, ಆತನ ಪಕ್ಕದಲ್ಲಿ ಒಂದು ಲಕ್ಷ ಕುದುರೆಯನ್ನು ಅರವತ್ತು ಸಾವಿರ ರಥವನ್ನು ಒಂದು ಲಕ್ಷ ಕಾಲಾಳನ್ನು ಕೂಡಿಕೊಂಡು ನಿಂತವರು ಸೋಮದತ್ತ ಬಾಸ್ತಿಕರು. ಅವರ ಪಕ್ಕದಲ್ಲಿ ದೇವೇಂದ್ರನಿಗೆ ಶತ್ರುಗಳಾಗಿ ವಿಕ್ರಮಾರ್ಜುನನ ಕಯ್ಯಲ್ಲಿ ಸತ್ತ ನಿವಾತಕವಚ, ಕಾಳಕೇಯ, ಪೌಳೋಮ, ತಳತಾಳುಕರೆಂಬ ರಾಕ್ಷಸರು ಹಳೆಯ ಶತ್ರುತ್ವವನ್ನು ನೆನೆಸಿಕೊಂಡು ಈಗ ಗರ್ತಾಧೀಶ, ಸುಶರ್ಮರೇ ಮೊದಲಾದವರಾಗಿಯೂ ಸಂಸಪ್ತಕರಾಗಿಯೂ ಹುಟ್ಟಿ ಬಂದಿರುವ ಮೂರುಕೋಟಿ ಅರವತ್ತು ಸಾವಿರ ರಾಕ್ಷಸಮುಖ್ಯರಾದ ನಾಯಕರು ಅರ್ಜುನನೊಡನೆ ಯುದ್ಧ ಮಾಡುವ ಕಾರ್ಯವನ್ನು ದುರ್ಯೊಧನನಲ್ಲಿ ಬೇಡಿ ಪಡೆದು ಹದಿನೆಂಟು ಕೋಟಿ ರಥದಿಂದ ಕೂಡಿ ಪ್ರತ್ಯೇಕವಾಗಿ ಸನ್ನದ್ದರಾಗಿ ನಿಂತಿದ್ದಾರೆ. ಅಲ್ಲದೆ ಈ ಕಡೆ ಚತುರಂಗ ಸೇನಾಸಮುದ್ರದ ಮಧ್ಯದಲ್ಲಿ ಕಳಿಂಗ ಕೊಂಗ ವಂಗಾಧೀಶರು ಎಂಬತ್ತು ಸಾವಿರ ಆನೆಯ ಗುಂಪುಗಳನ್ನೂ ಮೂರುಲಕ್ಷ ರಥವನ್ನೂ ಅರವತ್ತು ಕೋಟಿ ಕಾಲಾಳು ಸೈನ್ಯವನ್ನೂ ಕೂಡಿ ನಿಂತಿದ್ದಾರೆ. ಅಲ್ಲದೆ ಕ್ಷೇಮಧೂರ್ತಿಯೂ ಭೀಮನ ಕಯ್ಯಲ್ಲಿ ಸತ್ತ ಬಕಾಸುರ ಜಟಾಸುರರ ಮಕ್ಕಳಾದ ಅಳಂಭೂಷ, ಹಲಾಯುಧ, ಮುಸಲಾಯುಧ, ಕಾಳನೀಳರೇ ಮೊದಲಾದವರೂ ಕ್ರೂರರಾಕ್ಷಸಸೈನ್ಯದೊಡನೆ ಸುತ್ತಲೂ ವ್ಯಾಪಿಸಿ ಬಳಸಿ ನಿಂತಿದ್ದಾರೆ. ದುಶ್ಯಾಸನನೇ ಮೊದಲಾದ ನೂರು ಜನ ತಮ್ಮಂದಿರೂ ಲಕ್ಷಣನೇ ಮೊದಲಾದ ನೂರು ಜನ ಮಕ್ಕಳೂ ಅರವತ್ತು ಸಾವಿರ ರಥದಿಂದಲೂ ಹದಿನೆಂಟು ಸಾವಿರ ಮದದಿಂದ ಕುರುಡಾದ ಶ್ರೇಷ್ಟವಾದ ಆನೆಗಳಿಂದಲೂ ಕೂಡಿ ಪಂಚಮಹಾಶಬ್ದಗಳು ಪ್ರಳಯಕಾಲದ ಕರಿಯ ಮೋಡಗಳು ಮೊಳಗುವ ಹಾಗೆ ಮೊಳಗುತ್ತಿರಲು ಆಕಾಶ ಪ್ರದೇಶವೇ ಚಿಗುರಿದ ಹಾಗೆ ಹೊಳೆದು ,
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy