SearchBrowseAboutContactDonate
Page Preview
Page 480
Loading...
Download File
Download File
Page Text
________________ 31 ದಶಮಾಶ್ವಾಸಂ | ೪೭೫ ಶಕುನಿಯ ಮೊನೆಗೆ ನಾಲ್ವತ್ತು ಸಾಸಿರ ರಥಂಬೆರಸು ಸಹದೇವನುಮಂ ಕೃಪನ ಮೊನೆಗೊಂದಕ್ಕೋಹಿಣೀ ಬಲಂಬೆರಸು ಕೇಕಯರುಮಂ ಸಿಂಧುರಾಜನ ಮೊನೆಗೊಂದಕ್ಕೋಹಿಣೀ ಬಲಂಬೆರಸು ದ್ರುಪದನುಮಂ ಭಗದತ್ತನ ಮೊನೆಗೊಂದಕ್ಕೋಹಿಣೀ ಬಲಂಬೆರಸು ವಿರಾಟನುಮಂ ಜಟಾಸುರ ಬಕಾಸುರರ ಮಕ್ಕಳಳಂಭೂಷ ಹಳಾಯುದ್ಧ ಮುಗಳಾಯುದ್ಧ ಕಾಳ ನೀಳ ನಕ್ತಂಚರರ ಮೊನೆಗೊಂದಕ್ಕೋಹಿಣೀ ಬಲಂಬರಸು ಘಟೋತ್ಕಚನುಮಂ ವಿಂದನ ಮೊನೆಗೆ ಹದಿನೆಂಟು ಸಾಸಿರ ರಥಮುವೊಂದುಲಕ್ಕೆ ಮದದಾನೆಯುಂ ಬೆರಸು ಕೊಂತಿಯ ಮಾವನಪ್ಪ ಕೊಂತಿಭೋಜನುಮಂ ಎಂದಾನುವಿಂದರ ಮೊನೆಗಲುವತ್ತು ಸಾಸಿರ ರಥಂಬೆರಸು ನಾಗಕುಮಾರನನಂತಬಲಸಮನ್ವಿತನಿಳಾವಂತನುಮಂ ಭೂರಿಶ್ರವನ ಮೊನೆಗೆ ನಾಲ್ವತ್ತು ಸಾಸಿರ ರಥಮುಂ ನಾಲ್ವತ್ತು ಸಾಸಿರ ಮದಹಸ್ತಿಗಳುಂ ಬೆರಸು ಮದಗಜಾರೂಢನುತ್ತರನುಮಂ ಸುಯೋಧನನ ಮಕ್ಕಳ್ ಲಕ್ಕಣಂ ಮೊದಲಾಗೆ ನೂರ್ವರ ಮೊನೆಗುವತ್ತು ಸಾಸಿರ ರಥಂಬೆರಸು ಸುತ ಸೋಮಕ ಪ್ರಮುಖರಪ್ಪ ಪಂಚಪಾಂಡವರುಮಂ ಪೆಟ್ಟು ಕಾಂಭೋಜ ಸುದಕ್ಷಿಣ ದಂಡಧಾರರೆಂಬ ಮೂವರಹಿಣೀಪತಿಗಳ ಮೊನೆಗೆ ಮೂಲಕೋಟಿ ರಥಂಬೆರಸು ಪಾಂಡ್ಯ ಶ್ರೀಜಯ ಕೂಡಿದ ಸಾತ್ಯಕಿಯನ್ನು ನಿಯಮಿಸಿದನು. ದುರ್ಯೋಧನನೊಡನೆ ಯುದ್ಧ ಮಾಡುವುದಕ್ಕೆ ಒಂದು ಕೋಟಿ ರಥವನ್ನೂ ಒಂದಲಕ್ಷ ಉತ್ತಮಜಾತಿಯ ಆನೆಗಳನ್ನೂ ಒಳಗೊಂಡ ಭೀಮನನ್ನು ಸಿದ್ಧಪಡಿಸಿದನು. ಬೃಹದ್ಬಳನನ್ನು ಎದುರಿಸುವುದಕ್ಕೆ ಮೂವತ್ತು ಸಾವಿರ ರಥದಿಂದ ಕೂಡಿದ ಅಭಿಮನ್ಯುವೂ ದುಶ್ಯಾಸನನ ಕಾಳಗಕ್ಕೆ ನಲವತ್ತು ಸಾವಿರ ರಥದಿಂದ ಕೂಡಿದ ನಕುಲನೂ ಕೃಪನೊಡನೆ ಯುದ್ಧಮಾಡುವುದಕ್ಕೆ ಒಂದಕ್ಕೋಹಿಣೀ ಬಲದಿಂದ ಕೂಡಿದ ಕೇಕಯರೂ ಸೈಂಧವನ ಯುದ್ದಕ್ಕೆ ಒಂದಕ್ಕೋಹಿಣೀ ಬಲದಿಂದ ಕೂಡಿದ ದ್ರುಪದನೂ ಸಿದ್ಧರಾದರು. ಭಗದತ್ತನ ಸೈನ್ಯಕ್ಕೆ ಒಂದಕ್ಕೋಹಿಣೀ ಬಲದೊಡನೆ ವಿರಾಟನೂ ಬಕಾಸುರನ ಮಕ್ಕಳಾದ ಅಳಂಬೂಷ ಹಳಾಯುಧ ಮುಸಳಾಯುಧ ಕಾಳನೀಳರಾಕ್ಷಸರ ಮೊನೆಗೆ ಒಂದಕ್ಕೋಹಿಣೀಬಲದಿಂದ ಕೂಡಿದ ಘಟೋತ್ಕಚನೂ ನೇಮಕರಾದರು. ವಿಂದನೊಡನೆ ಯುದ್ಧ ಮಾಡುವುದಕ್ಕೆ ಹದಿನೆಂಟು ಸಾವಿರ ರಥವೂ ಒಂದು ಲಕ್ಷ ಮದ್ದಾನೆಗಳೂ ಕೂಡಿದ ಕುಂತಿಯ ಮಾವನಾದ ಕುಂತಿಭೋಜನು ಸಿದ್ಧನಾದನು. ವಿಂದಾನುವಿಂದರ ಸೈನ್ಯಕ್ಕೆ ಅರವತ್ತು ಸಾವಿರರಥದೊಡಗೂಡಿ ನಾಗಕುಮಾರನನ್ನೂ ಅನಂತಬಲದಿಂದ ಕೂಡಿದ ಇಳಾವಂತನನ್ನೂ ಭೂರಿಶ್ರವನೊಡನೆ ಯುದ್ಧ ಮಾಡುವುದಕ್ಕೆ ನಲವತ್ತು ಸಾವಿರ ತೇರುಗಳನ್ನೂ ನಲವತ್ತು ಸಾವಿರ ಮದ್ದಾನೆಗಳನ್ನೂ ಕೂಡಿ ಮದ್ದಾನೆಯನ್ನೇರಿದ್ದ ಉತ್ತರನನ್ನೂ ಏರ್ಪಡಿಸಿದನು. ದುರ್ಯೋಧನನ ಮಕ್ಕಳಾದ ಲಕ್ಷಣನೇ ಮೊದಲಾದ ನೂರು ಜನಗಳ ಯುದ್ಧಕ್ಕೆ ಅರವತ್ತು ಸಾವಿರ ತೇರಿನೊಡನೆ ಕೂಡಿದ ಸುತ ಸೋಮಕರೇ ಮುಖ್ಯರಾದ ಪಂಚಪಾಂಡವರನ್ನು ನೇಮಿಸಿದನು. ಕಾಂಭೋಜ ಸುದಕ್ಷಿಣ ದಂಡಧಾರರೆಂಬ ಮೂರುಮಂದಿ ಅಕ್ಟೋಹಿಣೀಪತಿಗಳ ಯುದ್ಧಕ್ಕೆ ಮೂರುಕೋಟಿ ರಥಗಳಿಂದ ಕೂಡಿದ ಪಾಂಡ್ಯ ಶ್ರೀಜಯ ಸೋಮಕರನ್ನೂ ಗೊತ್ತುಮಾಡಿದನು. ವೀರರಾದ ಪುಷ್ಕರ ಪಾರಿಯಾತ್ರ ಬರ್ಬರ
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy