SearchBrowseAboutContactDonate
Page Preview
Page 561
Loading...
Download File
Download File
Page Text
________________ ೫೫೬ | ಪಂಪಭಾರತಂ ವll ಅಂತತಿರಥ ಮಥನನ ರಥಕ್ಕದಿರದಿದಿರಂ ತನ್ನ ರಥಮಂ ಪರಿಯಿಸಿ ಜಯದ್ರಥಂ ಮುಟ್ಟೆವಂದುಉli ನಿನ್ನೆ ಪೊರಳ್ಳಿ ನಿನ್ನ ಮಗನಂ ಸೆರಗಿಲ್ಲದೆ ಕೊಂದನಿಂದುಮಿಂ ತಿನ್ನೆಗಮಿರ್ಪುದಂ ಭಯದಿನಿರ್ದೆನೆ ನಿನ್ನನೆ ಪಾರುತಿರ್ದೆನಂ | ದುನ್ನತ ಶೌರ್ಯದಿಂದಜಿತನಂ ನರನಂ ಮುನಿದೆಚ್ಚನೇಲುಮೆಂ ಟುನ್ನಿಶಿತಾಸ್ತದಿಂದದಟದೇಂ ದೊರೆವೆತ್ತುದೊ ಸಿಂಧುರಾಜನಾ || ೧೫೦ ವ|| ಅಂತೆಚ್ಚು ಕಿಚ್ಚುಂ ಕಿಡಿಯುಮಾಗಿ ಪರ್ಚಿದುಮ್ಮಚ್ಚರದಿಂದಚ್ಚರಿಯಾಗಿ ಕಾದೆ5 II ಎಂತಸತ್ತುತ್ರನಂ ಸಂಗರದೊಳಟೆದೆಯಿನ್ನಂತೆ ನಿಲ್‌ ಶಕ್ತಿ ಚಾತು ರ್ದಂತಂಗಳ್ ನಿನ್ನನಾಂ ಕೊಲ್ವೆಡೆಯೊಳಲಿ ಪೇಮ್ ಕಾವುವೇ ಕಾಯವಣೆಂ | ದಂತಾಂತೆಚ್ಚೆಚ್ಚು ಸೂತ ಧ್ವಜ ಹಯ ರಥ ಸಂಘಾತಮಂ ನುರ್ಗೆ ಲೋಕ ಕಂತಂ ಮಾಂತಕಂಟ್ರೋಲ್ ಗದೆವಿಡಿದುಜದೆಯರ್ಪನಂ ಕಂಡನಂತಂ ||೧೫೧ ಕ೦ll ತುಡು ಪಾಶುಪತಮನೆನೆ ನರ ನಡೆಮಡಗದೆ ತುಡೆ ದಿಶಾಳಿ ನಡುಗಿದುದು ಸುರು | Yುಡುಗಿದುದು ವಿಯತ್ತಳಮಳೆ ಪಿಡುಗಿದುದು ಕಲಂಕಿ ಕದಡಿದುದು ಶಿವನ ಮನಂ || ಶಕ್ತಿಗೂ ಇನ್ನು ಭಯದಿಂದ ನಾನು ಕುಗ್ಗಿರುವುದು ಯೋಗ್ಯವಲ್ಲ ಎಂದು ಹೊರಗೆ ಬಂದು ಪ್ರಾಣಾಪಹಾರಮಾಡುವ ಹಾಗೆ ತನ್ನ ಪರಾಕ್ರಮವನ್ನು ದೇವತೆಗಳೂ ಹೊಗಳುತ್ತಿರಲು ಜಗದೇಕಮಲ್ಲನಾದ ಅರ್ಜುನನಲ್ಲಿ ಹೋರಾಡಿದನು-ವ|| ಅತಿರಥಮಥನನಾದ ಅರ್ಜುನನ ರಥಕ್ಕಿದಿರಾಗಿ ಹೆದರದೆ ತನ್ನ ರಥವನ್ನು ಹಾಯಿಸಿ ಸೈಂಧವನು ಸಮೀಪಕ್ಕೆ ಬಂದು ೧೫೦. “ನಿನ್ನೆಯ ದಿನ ಭಯವಿಲ್ಲದೆ ನಿನ್ನ ಮಗನಾದ ಅಭಿಮನ್ಯುವನ್ನು ಹೊರಳಿಸಿ ಕೊಂದೆ. ಇಂದು ಇಲ್ಲಿಯವರೆಗೆ ಭಯದಿಂದ ಮರೆಯಾಗಿದ್ದೆನೆ ? ನಿನ್ನನ್ನೇ ನಿರೀಕ್ಷಿಸುತ್ತಿದ್ದೆ” ಎಂದು ಕೋಪದಿಂದಲೂ ಅತಿಶಯವಾದ ಪರಾಕ್ರಮದಿಂದಲೂ ಕೃಷ್ಣನನ್ನೂ ಅರ್ಜುನನ್ನೂ ಬಹಳಹರಿತವಾದ ಏಳೆಂಟು ಬಾಣಗಳಿಂದ ಹೊಡೆದನು. ಸೈಂಧವನ ಪರಾಕ್ರಮವು ಅದ್ಭುತವಾಯಿತು! ವll ಕೋಪಗೊಂಡು ಹೆಚ್ಚಿದ ಮತ್ಸರದಿಂದ ಆಶ್ಚರ್ಯವಾಗವ ಹಾಗೆ ಕಾದಿದನು. ೧೫೧. “ನನ್ನ ಮಗನನ್ನು ಹೇಗೆ ಕೊಂದೆಯೊ ಇದು ಹಾಗೆಯೇ; ನಿಲ್ಲು, ಶಕ್ತಿಯುಕ್ತವಾದ ಚತುರಂಗಸೈನ್ಯಗಳು ನಾನು ನಿನ್ನನ್ನು ಕೊಲ್ಲುವ ಸಂದರ್ಭದಲ್ಲಿ ರಕ್ಷಿಸಲಾರವು. ಸಾಯಿ” ಎಂದು ಪ್ರತಿಭಟಿಸಿ ಸಾರಥಿ, ಬಾವುಟ, ಕುದುರೆ ಮತ್ತು ತೇರಿನ ಸಮೂಹಗಳನ್ನು ನುಚ್ಚುನೂರಾಗಿ ಪುಡಿಯಾಗುವ ಹಾಗೆ ಹೊಡೆದನು. ಸೈಂಧವನು ರೋಷಾವೇಶದಿಂದ ಪ್ರಪಂಚಕ್ಕೆ ಅಂತ್ಯವನ್ನುಂಟುಮಾಡುವ ಯಮನಂತೆ ಗದೆಯನ್ನು ಹಿಡಿದು ವೇಗವಾಗಿ ಬರುತ್ತಿದ್ದುದ್ದನ್ನು ಕೃಷ್ಣನು ನೋಡಿ ಅರ್ಜುನನಿಗೆ ೧೫೨. 'ಪಾಶುಪತಾಸ್ತವನ್ನು ಪ್ರಯೋಗಿಸು' ಎಂದು (ಕೃಷ್ಣನು) ಹೇಳಿದನು. ಅರ್ಜುನನು ಸಾವಕಾಶಮಾಡದೆ ಅದನ್ನು ಪ್ರಯೋಗಿಸಲು ದಿಕ್ಕುಗಳ ಸಮೂಹವು ನಡುಗಿತು.
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy