SearchBrowseAboutContactDonate
Page Preview
Page 691
Loading...
Download File
Download File
Page Text
________________ ೬೮೬ | ಪಂಪಭಾರತಂ ಮII ಇನಿತೊಂದುಗ್ರರಣಪ್ರಘಟ್ಟಕದೂಳೀ ಭಾರಾವತಾರಂ ಧರಾಂ ಗನೆಗೀಯಿರ್ವರಿನಾದುದಾಯ್ತನಗೆ ನಿರ್ದಾಯಾದ್ಯಮಿಾ ಪಂಪ ಸಾ | ಲೈನಗಿಂ ರಾಜ್ಯಮ ಬಾಯಲ್ಕು ಹರಿಗಂಗುತ್ಸಾಹದಿಂ ಪಟ್ಟ ಬಂ ಧನಮಂ ಮಾಡುವಮಿಂದ ಹಸ್ತಿನಪುರಪ್ರಸ್ಥಾನಮಂ ಮಾಡುವಂ || ೧೧ ವಗ ಎಂಬುದುಮಶೇಷ ಧರಾಭಾರಮಂ ಶೇಷಂ ತಾಳುವಂತ ವಿಕ್ರಮಾರ್ಜುನಂಗಲ್ಲದೆ ಪಣಂಗೆ ತಾಳಲರಿದಿದರ್ಕಾನುಮೂಡಂಬಡುವೆನೆಂದು ಮುಕುಂದನನೇಕ ಮುಕುಂದಬ್ಬಂದಂಗಳ ಮೊಲಗೆ ಶುಭಮೂಹೂರ್ತದೊಳರಿಕೇಸರಿಯಂ ಮುಂದಿಟ್ಟು ಹಸ್ತಿನಪುರೋಪವನಮನೆಯ ವಂದಾಗ, ಚಂt ಮೃದುಮಧುರಶ್ಚನಂ ನೆಗಟಿ ಬಂದೆಳಮಾವಿನೊಳಿರ್ದು ಕೂಡ ಪಾ ಡಿದುದು ಮದಾಳಿಮಾಲೆ ಪುಗಲೆನ್ನದೆ ದಲ್ ಪುಗಿಯೆಂದು ಮಲುಗುಂ | ದದ ದನಿಯಿಂ ತಳಿರ್ತಸುಗೆಯೋಳ್ ನಲಸಿರ್ದ ಏಕಾಳಿ ಮೆಲ್ಲನೂ ಚೌುದು ಮನಮಾಜ್ ತೀಡಿದುದು ತೆಂಕಣ ತಂಬೆಲರಪ್ಪಿಕೊಳ್ಳವೋಲ್ || ೧೨ ಚoll ಪಸರಿಸಿ ಬಂದ ಮಾಮರನೆ ಬೆಳ್ಳೂಡ ರಾಗದ ಪುಂಜದನ್ನವ ಪ್ರಸುಗೆಯ ನೀಳ ಕೆಂದಳಿರೆ ಪಾಳಿಮಹಾಧ್ವಜಮೆತ್ತಮಿಂಪನಾ | ಲೈಸೆವಳಿಗೀತಿ ತಾನೆ ಜಯಗೀತಿಗಳಾಗಿರೆ ವಿಕ್ರಮಾರ್ಜುನಂ | ಗೊಸೆದಿದಿರ್ವಪ್ರವೋಲ್ ಬನವದೊಪ್ಪಿದುದಿಂತು ಬಸಂತರಾಜನಾ | ೧೩' ಕಡೆ ಧರ್ಮರಾಯನು ಕೃಷ್ಣನಿಗೆ ಹೀಗೆಂದನು-೧೧. ಇಷ್ಟು ಭಯಂಕರವಾದ ಈ ಯುದ್ಧಸಮಾರಂಭದಲ್ಲಿ ಈ ಭೀಮಾರ್ಜುನರಿಬ್ಬರಿಂದ ಭೂದೇವಿಗೆ ಈ ಭಾರದ ಇಳಿಯುವಿಕೆ ಆಯಿತು. ನನಗೆ ದಾಯಾದಿಗಳಿಲ್ಲದಿರುವುದೂ ಆಯಿತು. ಈ ವೈಭವವೇ ನನಗೆ ಸಾಕು. ನನಗೆ ಇನ್ನು ರಾಜ್ಯದಿಂದ ಪ್ರಯೋಜನವಿಲ್ಲ. ಹರಿಗನಾದ ಅರ್ಜುನನಿಗೆ ಇಂದೇ ಪಟ್ಟಾಭಿಷೇಕವನ್ನು ಮಾಡೋಣ, ಈ ದಿನವೇ ಹಸ್ತಿನಾಪುರಕ್ಕೆ ಪ್ರಯಾಣ ಮಾಡೋಣ. ವ|| ಎನ್ನಲು “ಸಮಸ್ತಭೂಭಾರವನ್ನೂ ಆದಿಶೇಷನು ಧರಿಸುವ ಹಾಗೆ ವಿಕ್ರಮಾರ್ಜುನನಲ್ಲದೆ ಬೇರೆಯವರಿಗೆ ಧರಿಸಲಸಾಧ್ಯ; ಇದಕ್ಕೆ ನಾನೂ ಒಪ್ಪುತ್ತೇನೆ”. ಎಂದು ಕೃಷ್ಣನು ಅನೇಕ ಮಂಗಳವಾದ್ಯಗಳ ಸಮೂಹವು ಭೋರ್ಗರೆಯುತ್ತಿರಲು ಶುಭಮುಹೂರ್ತದಲ್ಲಿ ಅರಿಕೇಸರಿಯನ್ನು ಮುಂದಿಟ್ಟು ಹಸ್ತಿನಾಪಟ್ಟಣದ ಸಮೀಪದಲ್ಲಿರುವ ತೋಟವನ್ನು ಸಮೀಪಿಸಿದನು. ೧೨. ಮೃದುಮಧುರವಾದ ಧ್ವನಿಯಿಂದ ಫಲಿತ ಎಳಮಾವಿನ ಮರದಲ್ಲಿದ್ದುಕೊಂಡು ಮದಿಸಿದ ದುಂಬಿಯ ಸಮೂಹವು ಕೂಡಲೆ ಹಾಡಿತು. ಪ್ರವೇಶಮಾಡಬೇಡ ಎನ್ನದೆ ಪ್ರವೇಶಮಾಡಿ ಎಂದು ಕಡಿಮೆಯಾಗದ ಧ್ವನಿಯಿಂದ ಚಿಗುರಿದ ಅಶೋಕಮರದಲ್ಲಿ ನೆಲಸಿದ್ದ ಕೋಗಿಲೆಗಳ ಗುಂಪು ನಿಧಾನವಾಗಿ ಕೂಗಿತು. ಮನಸ್ಸಿಗೆ ತೃಪ್ತಿಯಾಗುವಂತೆ ಆಲಿಂಗನ ಮಾಡಿಕೊಳ್ಳುವ ಹಾಗೆ ದಕ್ಷಿಣದಿಕ್ಕಿನ ತಂಗಾಳಿಯು ಬೀಸಿತು. ೧೩. ಚಿಗುರಿ ಹೂವಾದ ಮಾವಿನಮರವೇ ಶ್ವೇತಚ್ಛತ್ರಿ; ಕೆಂಪುಬಣ್ಣದ ರಾಶಿಯಂತಿರುವ ಅಶೋಕವೃಕ್ಷದ ಕೆಂಪುಚಿಗುರೇ ಪಾಳಿಧ್ವಜಗಳು. ಎಲ್ಲ ಕಡೆಯಲ್ಲಿಯೂ ಸೌಂದರ್ಯದಿಂದ ಕೂಡಿ ಪ್ರಕಾಶಿಸುವ
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy