SearchBrowseAboutContactDonate
Page Preview
Page 695
Loading...
Download File
Download File
Page Text
________________ ೬೯೦ / ಪಂಪಭಾರತಂ ವ|| ಆಗಳ್ ರಾಜ್ಯಾಭಿಷೇಕದ ನಂತರದೊಳ್ ಧರ್ಮನಂದನಂ ವಾಯುನಂದನಂ ದೇವಕೀನಂದನನಶ್ವಿನೀನಂದನರಯ್ಯರುಮನೇಕ ಮಂಗಳಾಭರಣಾಳಂಕೃತಶರೀರರರಿಕೇಸರಿಯಂ ಕೇಸರಿವಿಷ್ಟರದೊಳ್ ಕುಳ್ಳಿರಿಸಿ ಪಂಚರತ್ನಶಿಖಾವಿರಾಜಮಾನಮಪ್ಪ ಪಟ್ಟಮನೆ ಯಾದವ ವಂಶಸಂಭೂತೆಯುಮನೇಕಲಕ್ಷಣೋಪೇತೆಯುಮಪ್ಪ ಸುಭದ್ರೆಗೆ ಮಹಾದೇವಿವಟ್ಟಮಂ ಕಟ್ಟಿದಾಗಳ್ ಚಂ। ನೆಗಟ್ಟುದು ದೇವದುಂದುಭಿರವಂ ಸುರನಂದನದಿಂ ಪೊದಲ್ಲಿ ಬ ಲುಗುಳಳ ತಂದಲಂದು ಕವಿತಂದುದದಂ ತನಿಸೋಂಕು ಸೋಂಕಿ ಮ | ಲ್ಲಗೆ ಮಲಯಾನಿಳಂ ಸುಟೆದೊಡಂದು ಜಗಂ ಪೊಸತಾದುದೆಂದೊಡೇ ಮೊಗುದೂ ಪಟ್ಟಬಂಧನಮಹೋತ್ಸವಮಂ ಜಗದೇಕಮಲ್ಲನಾ || ೧೯ ಮುತ್ತಿನ ಪಚ್ಚೆ ಮಾಣಿಕದ ವಜ್ರದ ಕೇಟೆಯೊಳೊಂದಿ ಸಾಂದಿನೊಳ್ ಕತ್ತುರಿಯೊಂದು ಕೋಳೆಸಲೋಕುಳಿ ಚಂದನಗಂಧವಾರಿಯೊಳ್ | ಸುತ್ತಲುಮಂ ಪಡವ ಗೇಯದ ಪಂಪಿನಲಂಪನಾರ್ಗಮಾ ರ್ತಿತ್ತುದು ಪಟ್ಟಬಂಧನಮಹೋತ್ಸವಮಾ ಪಡೆಮಚ್ಚಿ ಗಂಡನಾ || ೨೦ ವ|| ಮತ್ತಮೈರಾವಣಾನ್ವಯನುಂ ಸುರಭಿನಿಶ್ವಾಸನುಂ ಸೂಕ್ಷ್ಮಬಿಂದುರುಚಿರನುಂ ಕಾಳಿಂಗ ವನಸಂಭೂತನುಮನೇಕಲಕ್ಷಣೋಪೇತನುಮಪ್ಪ ತ್ರಿಭುವನಾಭರಣಮೆಂಬಾನೆಗಮುಭಯಕುಲ ವll ರಾಜ್ಯಾಭಿಷೇಕವಾದ ಮೇಲೆ ಧರ್ಮರಾಯನೂ ಭೀಮ ಕೃಷ್ಣ ನಕುಲಸಹದೇವರೇ ಮೊದಲಾದ ಅಯ್ದುಜನರೂ ಅನೇಕ ಒಡವೆಗಳಿಂದ ಅಲಂಕಾರಮಾಡಲ್ಪಟ್ಟ ಶರೀರರಾಗಿ ಅರಿಕೇಸರಿಯನ್ನು ಸಿಂಹಾಸನದಲ್ಲಿ ಕುಳ್ಳಿರಿಸಿ ಅಯ್ತು ರತ್ನಗಳಿಂದ ಖಚಿತವಾದ ತಲೆಯ ಪಟ್ಟ (ಶಿರಪೇಷ್)ದಿಂದ ಪ್ರಕಾಶಮಾನವಾದ ಪಟ್ಟವಸ್ತ್ರವನ್ನು ಕಟ್ಟಿ ಯಾದವವಂಶದಲ್ಲಿ ಹುಟ್ಟಿದವಳೂ ಅನೇಕ ಲಕ್ಷಣಗಳಿಂದ ಕೂಡಿದವಳೂ ಆದ ಸುಭದ್ರೆಗೆ ಮಹಾರಾಣಿಯ ಪಟ್ಟವನ್ನು ಕಟ್ಟಿದರು. ೧೯. ದೇವದುಂದುಭಿ ಯಾಯ್ತು. ದೇವತೆಗಳ ತೋಟದಿಂದ ವ್ಯಾಪಿಸಿದ ದೊಡ್ಡ ಹೂಗಳ ತುಂತುರುಮಳೆಯಾಯಿತು. (ಪುಷ್ಪವೃಷ್ಟಿಯಾಯಿತು) ಅದರ ಇಂಪಾದ ಸ್ಪರ್ಶದಿಂದ ನಿಧಾನವಾಗಿ ಮಲಯಮಾರುತವು ಸುಳಿದಾಡಿತು. ಆ ದಿನ ಲೋಕವೇ ಹೊಸತಾಯಿತು ಎಂದರೆ ಜಗದೇಕಮಲ್ಲನಾದ ಅರ್ಜುನನ ಪಟ್ಟಬಂಧ ಮಹೋತ್ಸವವನ್ನು ಏನೆಂದು ಹೊಗಳುವುದು ೨೦. ಮುತ್ತು ಪಚ್ಚೆ ರತ್ನ ಮತ್ತು ವಜ್ರಗಳ ಸಾಲುಗಳಲ್ಲಿ ಸೇರಿ ಶ್ರೀಗಂಧ ಕಸ್ತೂರಿ ಮೊದಲಾದುವುಗಳ ಒಳ್ಳೆಯ ಕೆಸರಿನಲ್ಲಿಯೂ ಶ್ರೀಗಂಧದ ಪರಿಮಳಯುಕ್ತವಾದ ನೀರಿನಲ್ಲಿಯೂ ಓಕುಳಿಯಾಡಿಸುತ್ತ ಎಲ್ಲೆಡೆಯಲ್ಲಿಯೂ ಪ್ರೀತಿಯನ್ನುಂಟುಮಾಡುವ ಸಂಗೀತದ ವೈಭವದಿಂದ ಕೂಡಿದ ಅರ್ಜುನನ ಪಟ್ಟಬಂಧನಮಹೋತ್ಸವವು ಎಂತಹವರಿಗೂ ಸಾಕಷ್ಟು ಸಂತೋಷವನ್ನು ಕೊಟ್ಟಿತು. ವ|| ಮತ್ತು ಐರಾವತದ ವಂಶದಲ್ಲಿ ಹುಟ್ಟಿದುದೂ ಸುಗಂಧಯುಕ್ತವಾದ ಉಸಿರುಳ್ಳುದೂ ಸೂಕ್ಷ್ಮವಾದುದೂ ಸಣ್ಣ ಸಣ್ಣ ಬಿಳಿಯ ಮಚ್ಚೆಗಳಿಂದ ರಮ್ಯವಾದುದೂ ಕಳಿಂಗದೇಶದ ಅರಣ್ಯದಲ್ಲಿ ಹುಟ್ಟಿದುದೂ ಅನೇಕ ಲಕ್ಷಣಗಳಿಂದ ಕೂಡಿದುದೂ
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy