SearchBrowseAboutContactDonate
Page Preview
Page 703
Loading...
Download File
Download File
Page Text
________________ ೬೯೮ / ಪಂಪಭಾರತಂ ನಟ್ಟು ನಿಲ್ಕುದಲಿಂ ಸಮರೈಕಮೇರುವುಂ ಗೊಜ್ಜಿಗನೆಂಬ ಸಕಳ ಚಕ್ರವರ್ತಿ ಮುಳಿಯ ತನಗೆ ಶರಣಾಗತನಾದ ವಿಜಯಾದಿತನಂ ಕಾದ ಬಾಳನದೋಳ್ ಶರಣಾಗತ ಜಳನಿಧಿಯುಂ ವಿನಯಮೇ ತನಗೆ ಭೂಷಣಮಾಗೆ ಮಾಡುವುದಂ ವಿನಯ ಭೂಷಣನುಂ ಲೋಕಕ್ಕೆಲ್ಲಮಸಾಧಾರಣಮಪ್ಪ ದಾನಗುಣದೊಳ ಲೋಕೈಕಕಲ್ಪದ್ರುಮನುಂ ಎನಿತಾನುಂ ಗಜಗಮನಂಗಳಂ ತಾನೆ ಸಮದನಪ್ಪುದಂ ಗಜಗಮನರಾಜಪುತ್ರನುಂ ಎಂತಪ್ಪ ಗರ್ವವ್ಯಾಳಿಯುಮನತಿವರ್ತಿಗಳುಮನಾರೂಢದೊಳ್ ತನಗಳವಡುವುದಲಿಂದಾರೂಢ ಸರ್ವಜ್ಞನುಂ ಪರಮಾತ್ಮನಂತೆ ಲೋಕಾಲೋಕದ ವಸ್ತುಗಳುಮಂ ಕರತಳಾಮಳಕವಾಗುವುದರಿಂ ನೃಪ ಪರಮಾತ್ಮನುಂ ಎಂತಪ್ಪ ಪಂಡಿತರ ಗೋಷ್ಠಿಯೊಳಂ ತಾನೆ ಸೊಗಯಿಸುವುದು ವಿಬುದ ವನಜವನಕಳಹಸನುಂ ಕೆಯಯದೆ ಸೊಗಯಿಸುವನಪದ ಸಹಜಮನೋಜನುಂ ಎಂತಪ್ಪ ಬರ್ದೆಯರುಮಂ ಬಗೆಗೆ ವರಿಸುವ ತಕ್ಕಿಲ್ ಸುರತಮಕರಧ್ವಜನುಂ ಕೂರ್ಪ ಕೂರದರ ಪಡೆಗಳೆರಡುಂ ತನ್ನನೆ ಮೆಚ್ಚುವುದುಂ ಪಡೆಮಚ್ಚೆಗಂಡನುಂ ಎಂತಪ್ಪ ಮಾರ್ವಲಂಗಳುಮಂ ನೋಡುತ್ತ ಗೆಲ್ಲುದಂ ನೋಡುತ್ತೆ ಗೆಲ್ಯನುಂ ಮಹಾ ಭಾರಾವತಾರದೊಳತಿರಥ ಮಹಾರಥ ಸಮರರ್ಥಾರ್ಧರಥರ್ಕಳಂ ಪಡಲ್ವಡಿಸುವುದeಂ ಸಾಹಸಾರ್ಜುನನುಮಮರೇಂದ್ರನೊಳರ್ಧಾಸನಮತದ ಮಹಾ ಮಹಿಮೆಯೊಳ್ ಮಹಿಮಾರ್ಣವನುಮರಿಕರಿಗಳಂ ಪಡಲ್ವಡಿಸುವ ಬೀರದೊಳರಿ ಕೇಸರಿಯುಮಾಗಿ ಅಂಗೀಕರಿಸುವುದರಿಂದ ಪರಾಕ್ರಮಧವಳನೂ ಎಂತಹ ಯುದ್ದದಲ್ಲಿಯೂ ಬಿಟ್ಟುಹೋಗದೆ ಸ್ಥಿರವಾಗಿ ನಿಲ್ಲುವುದರಿಂದ ಸಮರೈಕಮೇರುವೂ ಗೊಜ್ಜಿಗನೆಂಬ ಸಕಳಚಕ್ರವರ್ತಿಯ ಕೋಪಕ್ಕೆ ಪಾತ್ರನಾದ ವಿಜಯಾದಿತ್ಯನನ್ನು ರಕ್ಷಿಸಿದ ಪರಾಕ್ರಮದಿಂದ (ರಕ್ಷಿಸಿದುದರಿಂದ) ಶರಣಾಗತಜಳನಿಧಿಯೂ ವಿನಯವನ್ನೇ ತನಗೆ ಒಡವೆಯನ್ನಾಗಿ ಮಾಡಿಕೊಂಡಿರುವುದರಿಂದ ವಿನಯಭೂಷಣನೂ ಲೋಕಕ್ಕೆಲ್ಲ ಅಸಾಧಾರಣ ರೀತಿಯದಾಗಿರುವ ದಾನಗುಣದಿಂದ ಲೋಕೈಕ ಕಲ್ಪದ್ರುಮನೂ ಎಷ್ಟೋ ಗಜಶಾಸ್ತ್ರಗಳನ್ನು ತಾನೆ ರಚಿಸಿರುವುದರಿಂದ ಗಜಾಗಮ ರಾಜಪುತ್ರನೂ ಎಂತಹ ಮದ್ದಾನೆಯನ್ನೂ ವಶಕ್ಕೆ ಬರದೇ ಇರುವ ತುಂಟಾನೆಗಳನ್ನೂ ಹತ್ತುವುದರಲ್ಲಿ ಸಮರ್ಥನಾಗಿರುವುದರಿಂದ ಆರೂಢಸರ್ವಜ್ಞನೂ ಪರಮಾತ್ಮನ ಹಾಗೆ ಲೋಕಾಲೋಕ ವಸ್ತುಗಳನ್ನು ಕಯ್ಯಲ್ಲಿರುವ ನೆಲ್ಲಿಯಕಾಯಿನಂತೆ ತಿಳಿದಿರುವುದರಿಂದ ನೃಪಪರಮಾತ್ಮನೂ ಎಂತಹ ವಿದ್ವಾಂಸರ ಸಮೂಹದಲ್ಲಿಯೂ ತಾನೇ ಪ್ರಕಾಶಮಾನವಾಗಿರುವುದರಿಂದ ವಿಬುಧವನಜವನಕಳಹಂಸನೂ ಅಲಂಕಾರಮಾಡಿಕೊಳ್ಳದೆಯೇ ಸುಂದರ ನಾಗಿರುವುದರಿಂದ ಸಹಜಮನೋಜನೂ ಎಂತಹ ಪ್ರೌಢಸ್ತ್ರೀಯರನ್ನೂ ತನ್ನಲ್ಲಿ ಪ್ರೀತಿಮಾಡುವ ಹಾಗೆ ಮಾಡುವ ಯೋಗ್ಯತೆಯಿಂದ ಸುರತಮಕರಧ್ವಜನೂ ಪ್ರೀತಿಸುವ ಮತ್ತು ಪ್ರೀತಿಸದಿರುವ ಎರಡುಸೆನ್ಯಗಳೂ ತನ್ನನ್ನು ಮೆಚ್ಚುವುದರಿಂದ ಪಡೆಮೆಚ್ಚೆಗಂಡನೂ ಎಂತಹ ಪ್ರತಿಸೈನ್ಯವನ್ನೂ ನೋಡುವುದರಿಂದಲೇ ಗೆಲ್ಲುವುದರಿಂದ ನೋಡುತ್ತೆ ಗೆಲ್ಬನೂ ಮಹಾಭಾರತ ಯುದ್ಧದಲ್ಲಿ ಅತಿರಥ ಸಮರಥ ಅರ್ಧರಥರುಗಳನ್ನೂ ಕೆಳಗೆ ಬೀಳುವ ಹಾಗೆ ಮಾಡುವುದರಿಂದ ಸಾಹಸಾರ್ಜುನನೂ ದೇವೇಂದ್ರನೊಡನೆ ಅರ್ಧಾಸನವನ್ನು ಹತ್ತಿದ ಮಹಾಮಹಿಮೆಯಿಂದ ಮಹಿಮಾರ್ಣವನೂ ಶತ್ರುಗಳ ಆನೆಗಳನ್ನು
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy