SearchBrowseAboutContactDonate
Page Preview
Page 707
Loading...
Download File
Download File
Page Text
________________ ೭೦೨ / ಪಂಪಭಾರತಂ 'ಕಂ ಆತಂಗರಿಕೇಸರಿ ಸಂ ಪ್ರೀತಿಯ ಬಟ್ಟೆಯಟ್ಟಿ ಪಿರಿದನಿತ್ತು ನಿಜಾಭಿ | ಖ್ಯಾತಿಯನಿಳೆಯೊಳ್ ನಿಸ ಶ್ರೀ ತಂದಿತಿಹಾಸ ಕಥೆಯನೊಪ್ಪಿಸ ಕುಣಿತಂ || ಶೌತಮಿದು ತನಗೆ ಗಂಗಾ ಸೋತದವೊಲಳುಂಬಮಾಗಿ ಗೆಡೆಗೊಳ್ಳದೆ ವಿ | ಖ್ಯಾತ ಕವಿ ವೃಷಭ ವಂಶೋ ದೂತಮೆನಲ್ ಬರಿಸದೊಳಗೆ ಸಮವಿನೆಗಮಿದಂ || ೫೧ ೫೨ ವ|| ಅದೆಂತೆನೆ ಆದಿವಂಶಾವತಾರಸಂಭವಂ ರಂಗಪ್ರವೇಶಂ ಜತುಗೃಹದಾಹಂ ಹಿಡಿಂಬ ವಧೆಬಕಾಸುರವಧೆ ದೌಪದೀಸ್ವಯಂವರಂ ವೈವಾಹಂ ಯುಧಿಷ್ಠಿರಪಟ್ಟಬಂಧನಂ ಇಂದ್ರಪ್ರಸ್ಥ ಪ್ರವೇಶಂ ಅರ್ಜುನದಿಗ್ವಿಜಯಂ ದ್ವಾರಾವತೀಪ್ರವೇಶಂ ಸುಭದ್ರಾಹರಣಂ ಸುಭದ್ರಾ ವಿವಾಹಂ ಖಾಂಡವವನ ದಹನಂ ಮಯ ದರ್ಶನಂ ನಾರದಾಗಮನಂ ಜರಾಸಂಧ ವಧ ರಾಜಸೂಯಂ ಶಿಶುಪಾಲವಧೆ ದೂತವೃತಿಕರಂ ವನ ಪ್ರವೇಶಂ ಕಿತ್ಕಾರ ವಧೆ ಕಾಮಕವನದರ್ಶನಂ ದೈತವನ ಪ್ರವೇಶಂ ಸೈಂಧವಬಂಧನಂ ಚಿತ್ರಾಂಗದಯುದ್ಧಂ ಕಿರಾತದೂತಾಗಮನಂ ದೌಪದೀ ವಾಕ್ಯಂ ಪಾರಾಶರ ವೀಕ್ಷಣಂ ಇಂದ್ರಕೀಲಾಭಿಗಮನಂ ಈಶ್ವರಾರ್ಜುನ ಯುದ್ಧಂ ದಿವ್ಯಾಸ್ತ್ರ ಲಾಭಂ ಇಂದ್ರಲೋಕಾಲೋಕನಂ ನಿವಾತಕವಚಾಸುರವಧೆ ಕಾಳಕೇಯ ಪೌಲೋಮವಧ ಸೌಗಂಧಿಕಕಮಲಾಹರಣಂ ಜಟಾಸುರವಧೆ ಮಾಯಾಮತ್ತಹಸ್ತಿ ವ್ಯಾಜಂ ವಿರಾಟಪುರ ಎಂತಹ ಸತ್ಕವಿಯೋ? ೫೧. ಆತನಿಗೆ (ಆ ಪಂಪನಿಗೆ) ಅರಿಕೇಸರಿರಾಜನು ಅತ್ಯಂತ ಪ್ರೀತಿಯಿಂದ ಹೇಳಿಕಳುಹಿಸಿ ವಿಶೇಷವಾಗಿ ದಾನಮಾಡಿ ತನ್ನ ಕೀರ್ತಿಯನ್ನು ಭೂಮಿಯಲ್ಲಿ ಸ್ಥಾಪಿಸೆಂದು ಹೇಳಲು ಈ ರೀತಿಯಾದ ಇತಿಹಾಸ ಕಥೆಯನ್ನು ರಚಿಸಿ ಒಪ್ಪಿಸಲು ನಿಶ್ಚಯಿಸಿದನು. ೫೨. ವೇದಸದೃಶವಾದ ಈ ಕೃತಿಯು ತನಗೆ ಗಂಗಾಪ್ರವಾಹದಂತೆ ಅತ್ಯತಿಶಯವಾಗಿ ಪರರ ಸಹಾಯವನ್ನಪೇಕ್ಷಿಸದೆ ಪ್ರಸಿದ್ಧರಾದ ಕವಿಶ್ರೇಷ್ಠರ ಪರಂಪರೆಯಲ್ಲಿಯೇ ಹುಟ್ಟಿತು ಎನ್ನುವ ಹಾಗೆ ಒಂದು ವರ್ಷದಲ್ಲಿ ರಚಿತವಾಯಿತು. ವ!! ಅದು ಹೇಗೆಂದರೆ ಆದಿವಂಶಾವತಾರಸಂಭವ, ರಂಗಪ್ರವೇಶ, ಅರಗಿನಮನೆಯ ದಾಹ, ಹಿಡಿಂಬವಧೆ, ಬಕಾಸುರವಧೆ, ದೌಪದೀಸ್ವಯಂವರ, ವಿವಾಹ, ಧರ್ಮರಾಯಪಟ್ಟಾಭಿಷೇಕ, ಇಂದ್ರಪ್ರಸ್ಥಪ್ರವೇಶ, ಅರ್ಜುನ ದಿಗ್ವಿಜಯ, ದ್ವಾರಾವತೀ ಪ್ರವೇಶ, ಸುಭದ್ರಾಹರಣ, ಸುಭದ್ರಾವಿವಾಹ, ಖಾಂಡವವನ ದಹನ, ಮಯದರ್ಶನ, ನಾರದಾಗಮನ, ಜರಾಸಂಧವಧೆ, ರಾಜಸೂಯ, ಶಿಶುಪಾಲವಧೆ, ದೂತವ್ರತಿಕರ, ವನಪ್ರವೇಶ, ಕೀಚಕವಧೆ, ಕಾಮ್ಯಕವನದರ್ಶನ, ದೈತವನಪ್ರವೇಶ, ಸೈಂಧವಬಂಧನ, ಚಿತ್ರಾಂಗದಯುದ್ಧ, ಕಿರಾತದೂತಾಗಮನ, ದೌಪದೀವಾಕ್ಯ, ವ್ಯಾಸರ ದರ್ಶನ, ಇಂದ್ರಕೀಲಾಭಿಗಮನ, ಈಶ್ವರಾರ್ಜುನಯುದ್ಧ, ದಿವ್ಯಾಸ್ತ್ರಲಾಭ, ಇಂದ್ರಾಲೋಕಾಲೋಕನ, ನಿವಾತಕವಚಾಸುರವಧೆ, ಕಾಳಕೇಯಪೌಲೋಮವಧೆ, ಸೌಗಂಧಿಕಕಮಲಾಹರಣ, ಜಟಾಸುರವಧೆ, ಮತ್ತಗಜದ ವೃತ್ತಾಂತ,
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy