SearchBrowseAboutContactDonate
Page Preview
Page 708
Loading...
Download File
Download File
Page Text
________________ ಚತುರ್ದಶಾಶ್ವಾಸಂ | ೭೦೩ ಪ್ರವೇಶಂ ಕೀಚಕವಧೆ ದಕ್ಷಿಣೋತ್ತರ ಗೋಗ್ರಹಣಂ ಅಭಿಮನ್ನು ವಿವಾಹಂ ಮಂತ್ರಾಲೋಚನಂ ದೂತಕಾರ್ಯo ಕುರುಕ್ಷೇತ್ರಪ್ರಯಾಣಂ ಭೀಷ್ಮ ಕರ್ಣ ವಿವಾದಂ ಯುದ್ಯೋದ್ಯೋಗಂ ಶ್ವೇತ ವಧೆ ಭೀಷ್ಮಶರ ಶಯನಂ ದ್ರೋಣಾಭಿಷೇಕಂ ಅಭಿಮನ್ನು ವಧೆ ಸೈಂಧವ ವಧೆ ಘಟೋತ್ಕಚ ವಧ ದ್ರೋಣಚಾಪ ಮೋಕ್ಷಂ ದ್ರೋಣ ವಧೆ ಅಶ್ವತ್ಥಾಮ ಕರ್ಣ ವಿವಾದ ಕರ್ಣಾಭಿಷೇಕಂ ಸಂಸಪ್ತಕ ವಧ ದುಶ್ಯಾಸನ ವಧೆ ವೇಣೀಸಂಹನನಂ ಕರ್ಣಾರ್ಜುನ ಯುದ್ಧಂ ಕರ್ಣ ಸೂರ್ಯಲೋಕಪ್ರಾಪ್ತಿ ಶಲ್ಯಾಭಿಷೇಕಂ ಶಲ್ಯನಿಪಾತನಂ ಭೀಮ ದುರ್ಯೊಧನ ಗದಾಯುದ್ಧಂ ದುರ್ಯೋಧನ ವಧೆ ಪಂಚಪಾಂಡವಹರಣಂ ಪರ್ವ೦ ಅರ್ಜುನಾಭಿಷೇಕಂ ಪಳವುಮುಪಾ ಖ್ಯಾನ ಕಥೆಗಳೊಳಮೊಂದುಂ ಕುಂದಲೀಯದೆ ಪೇಟಿಂ ಚoll ಎಸೆಯ ಸಮಸ್ತ ಭಾರತಮನಾವ ನರೇಂದ್ರರುಮಾರ್ತು ಕೂರ್ತು ಪೇ ಆಸರೆ ಕವೀಂದ್ರರುಂ ನೆಯ ಪೇಪರೆ ಪೇಟಿಪೊಡೆಯ್ದೆ ನೀನೆ ಪೇ | ಟಿಸುವೆಯುದಾತ್ತ ಕೀರ್ತಿ ನಿಲೆ ಪೇಳ್ಕೊಡೆ ಪಂಪನೆ ಪೇಟ್ಟುಮಿಂತು ಪೇ, ಟಿಸಿದ ನರೇಂದ್ರರುಂ ನೆಯ ಪೇಟ್ಟಿ ಕವೀಂದ್ರರುಮಾರ್‌ ಧರಿತ್ರಿಯೊಳ್ ||೫೩ ಎನೆ ಸಕಲಾವನೀತಳ ಜನಂ ಪಿರಿದುಂ ದಯೆಗೆಯ್ದು ಸಾರ್ಚಿ ಮ ಲನೆ ಪಿರಿದಪ್ಪ ಗೌರವದ ಮೈಮೆಯ ಮನ್ನಣೆಯೋಳಿಗಳ್ ಕರಂ | ಮನಮನಲರ್ಚೆ ಕೀರ್ತಿ ಜಗದೊಳ್ ನಿಲೆ ಪೇಚಿಸಿದಂ ಜಗಕ್ಕೆ ನ. ಚಿನ ಕವಿತಾ ಗುಣಾರ್ಣವನಿನೀ ಕೃತಿ ಬಂಧನಮಂ ಗುಣಾರ್ಣವಂ || ೫೪ ವಿರಾಟಪುರಪ್ರವೇಶ, ಕೀಚಕವಧೆ, ದಕ್ಷಿಣೋತ್ತರ ಗೋಗ್ರಹಣ, ಅಭಿಮನ್ಯುವಿವಾಹ, ಮಂತ್ರಾಲೋಚನೆ, ದೂತಕಾರ್ಯ, ಕುರುಕ್ಷೇತ್ರ ಪ್ರಯಾಣ, ಭೀಷ್ಮಕರ್ಣವಿವಾದ, ಯುದ್ಯೋಗ, ಶ್ವೇತವಧೆ, ಭೀಷ್ಮಶರಶಯನ, ದ್ರೋಣಾಭಿಷೇಕ, ಅಭಿಮನ್ಯುವಧೆ, ಸೈಂಧವವಧೆ, ಘಟೋತ್ಕಚವಧೆ, ದ್ರೋಣಚಾಪಮೋಕ್ಷ, ದ್ರೋಣವಧೆ, ಅಶ್ವತ್ಥಾಮಕರ್ಣ ವಿವಾದ, ಕರ್ಣಾಭಿಷೇಕ, ಸಂಸಪ್ತಕವಧೆ, ದುಶ್ಯಾಸನವಧೆ, ಮುಡಿಯನ್ನು ಕಟ್ಟುವುದು, ಕರ್ಣಾರ್ಜುನರ ಯುದ್ದ, ಕರ್ಣನ ಸೂರ್ಯಲೋಕಪ್ರಾಪ್ತಿ, ಶಲ್ಯಾಭಿಷೇಕ, ಶಲ್ಯನಿಪಾತನ, ಭೀಮದುರ್ಯೊಧನ 'ಗದಾಯುದ್ಧ, ದುರ್ಯೋಧನವಧೆ, ಪಂಚಪಾಂಡವಹರಣ, ಸ್ತ್ರೀಪರ್ವ, ಅರ್ಜುನಾಭಿಷೇಕ ಮೊದಲಾದ ಇತರ ಅನೇಕ ಉಪಾಖ್ಯಾನ ಕತೆಗಳಲ್ಲಿ ಒಂದೂ ತಪ್ಪದೆ ಹೇಳಿದನು. ೫೩. ಇದುವರೆಗೆ ಯಾವ ರಾಜರೂ ಸಮರ್ಥರಾಗಿ ಪ್ರೀತಿಯಿಂದ ಪ್ರಸಿದ್ಧವಾದ ಸಮಗ್ರಭಾರತವನ್ನು ಹೇಳಿಸಿಲ್ಲ. ಕವಿಶ್ರೇಷ್ಠರೂ ಪೂರ್ಣವಾಗಿ ಹೇಳಿಲ್ಲ. ಹೇಳಿಸುವುದಾದರೆ ನೀನೆ ಚೆನ್ನಾಗಿ ಹೇಳಿಸುತ್ತೀಯೆ; ಉನ್ನತವಾದ ಕೀರ್ತಿ ನಿಲ್ಲುವ ಹಾಗೆ ಹೇಳುವ ಪಕ್ಷದಲ್ಲಿ ಪಂಪನೆ ಹೇಳುತ್ತಾನೆ. ಹೀಗೆ ಹೇಳಿಸಿದ ರಾಜರೂ ಪೂರ್ಣವಾಗಿ ಹೇಳಿದ ಕವಿಶ್ರೇಷ್ಠರೂ ಲೋಕದಲ್ಲಿ ಯಾರಿದ್ದಾರೆ? ೫೪, ಎಂದು ಸಮಸ್ತ ಭೂಮಂಡಲದ ಜನವೂ ಹೇಳಲು ಗುಣಾರ್ಣವನಾದ ಅರಿಕೇಸರಿಯು ವಿಶೇಷವಾದ ಕೃಪೆಮಾಡಿ ಹಿರಿದಾದ ಮಹಿಮೆಯ ಸತ್ಕಾರಸಮೂಹಗಳನ್ನು ಸದ್ದಿಲ್ಲದೆ ಮಾಡಿ. ವಿಶೇಷವಾಗಿ ಮನಸ್ಸನ್ನು ಅರಳಿಸಲು (ತೃಪ್ತಿಪಡಿಸಲು) ಅವನ ಕೀರ್ತಿ
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy