SearchBrowseAboutContactDonate
Page Preview
Page 709
Loading...
Download File
Download File
Page Text
________________ ೭೦೪) ಪಂಪಭಾರತಂ ಪಿರಿಯಕ್ಕರ || ತುಡುಗೆ ನಿಚ್ಚಲುಂ ಪಂಚರತ್ನಂಗಳುಂ ಪೊಮಡ ತನ್ನುಡುವುಪ್ಪಟಂಗಳ್ 'ಮಡಿಯೊಳಾಗೆಯುಮಂ ಕಂಡಾಗಳ ಪಿರಿಯ ಬಿತ್ತರಿಗೆಯಂ ಕೆಲದೊಳಿಕ್ಕಿ | ಕೊಡುವ ಬಾಡಕ್ಕಂ ಜೀವಧನಂಗಳಂ ಬಿಡುವಣ್ಣಂ ಲೆಕ್ಕಮಿಲ್ಲೆನಿಸಿ ರಾಗಂ ಗಿಡದ ಕೊಂಡಾಡಿದಂ ಬಲ್ಲಹನತಿಯ ಗುಣಾರ್ಣವಂ ಕವಿತಾಗುಣಾರ್ಣವನಂಗೆ ೫೫ ಬೀರದಳವಿಯ ನನ್ನಿಯ ಚಾಗದ ಶಾಸನಂ ಚಂದ್ರಾರ್ಕತಾರಂಬರಂ ಮೇರು ನಿಲ್ಕಿನಂ ನಿಲವೇಚ್ಯುಂ ಕಾವ್ಯಕ್ಕೆ ತಾನಿತ್ತ ಶಾಸನದಗ್ರಹಾರಂ | ಸಾರಮೆಂಬಿನಂ ಹೆಸರಿಟ್ಟು ತಾನೀಯ ಹರಿಗನ ಧರ್ಮ ಭಂಡಾರದಂತ ಸಾರಮಾದುದು ಬಿಟ್ಟಗ್ರಹಾರಮಾ ಬಚ್ಚಸಾಸಿರದೊಳು ಧರ್ಮವುರಂ 11೫೬ ಚಂ| ದಸ ಮಖಧೂಮದಿಂ ದ್ವಿಜರ ಹೋಮದಿನೊಟ್ಟೆಯ ಹಂಸ ಕೊಕ ಸಾ ರಸ ಕಳ ನಾದದಿಂದೊಳಗೆ ವೇದನಿನಾದದಿನತ್ತಮೆಯ ಶೋ | ಭಿಸಿ ಸುರಮಥ್ಯಮಾನ ವನಧಿ ಕ್ಷುಭಿತಾರ್ಣ ಘೋಪದಂತ ಘೋ ರ್ಣಿಸುತಿರಲೀ ಗುಣಾರ್ಣವನ ಧರ್ಮದ ಧರ್ಮವುರಂ ಮನೋಹರಂ || ೫೭ ನಿಲ್ಲುವಂತೆ ಲೋಕದಲ್ಲಿ ಪ್ರಸಿದ್ಧನಾದ ಕವಿತಾಗುಣಾರ್ಣವನಾದ ಪಂಪನಿಂದ ಈ ಕಾವ್ಯಪ್ರಬಂಧವನ್ನು ಗುಣಾರ್ಣವನು ಹೇಳಿಸಿದನು. ೫೫. ಪ್ರತಿನಿತ್ಯವೂ ಆಭರಣಗಳನ್ನೂ ಪಂಚರತ್ನಗಳನ್ನೂ ಹೊರಗೆ ಹೊರಡಬೇಕಾದರೆ ತಾನು ಸ್ವಂತವಾಗಿ ಧರಿಸುವ ಶ್ರೇಷ್ಠವಾದ ವಸ್ತ್ರಗಳನ್ನೂ ಒಳ್ಳೆಯ ಮಡಿಯಾಗಿರುವ ಸ್ಥಿತಿಯಲ್ಲಿ ಪ್ರೀತಿಯಿಂದ ಕೊಡುವನು. ಉನ್ನತವಾದ ಆಸನಗಳನ್ನೂ ತನ್ನ ಪಕ್ಕದಲ್ಲಿಯೇ ಹಾಸಿ ಕುಳ್ಳಿರಿಸಿಕೊಂಡು ಗೌರವಿಸುವನು. ಅವನು ದಾನಮಾಡುವ ಹಳ್ಳಿಗಳಿಗೂ ಗೋವುಗಳೇ ಮೊದಲಾದ ಪ್ರಾಣಿಗಳಿಗೂ ದಾಸಿಯರಿಗೂ ಲೆಕ್ಕವೇ ಇಲ್ಲ. ಪ್ರೀತಿಯು ಕಡಿಮೆಯಾಗದಂತೆ ರಾಷ್ಟ್ರಕೂಟರ ರಾಜನಾದ ವಲ್ಲಭದೇವನಾದ ಮೂರನೆಯ ಕೃಷ್ಣನು ತಿಳಿಯುವಂತೆ ಕವಿತಾಗುಣಾರ್ಣವನಾದ ಪಂಪಕವಿಯನ್ನು ಸತ್ಕರಿಸಿದನು. ೫೬. ತನ್ನ ವೀರ್ಯದ ಪರಾಕ್ರಮದ ಶಕ್ತಿಯ ಸತ್ಯದ ದಾನದ (ಪ್ರತೀಕಾರವಾಗಿರುವ) ಶಾಸನವು ಚಂದ್ರಸೂರ್ಯ ನಕ್ಷತ್ರಗಳಿರುವವರೆಗೆ ಮೇರುಪರ್ವತ ನಿಲ್ಲುವಂತೆ ಕಾವ್ಯಕ್ಕೆ ಬಹುಮಾನವಾಗಿ (ಸಂಭಾವನೆಯಾಗಿ) ತಾನು ಕೊಟ್ಟ ಶಾಸನದಗ್ರಹಾರವು ಸಾರವತ್ತಾಗಿ ನಿಲ್ಲಬೇಕು ಎಂದು ಹೊಸದಾಗಿ ನಾಮಕರಣಮಾಡಿ ಕೊಡಲು ಆ ಬಚ್ಚೆಸಾಸಿರವೆಂಬ ನಾಡಿನಲ್ಲಿ ಧರ್ಮಪುರವೆಂಬ ಅಗ್ರಹಾರವು ಅರಿಕೇಸರಿಯ ಧರ್ಮಭಂಡಾರದಂತೆ (ಧರ್ಮವು ಕೂಡಿಟ್ಟಿರುವ ಉಗ್ರಾಣದಂತೆ) ಸಾರವತ್ತಾದುದು ಆಯಿತು. ೫೭. ದಿಕ್ಕುಗಳು ಯಜ್ಞಯಾಗಗಳ ಹೊರೆಯಿಂದಲೂ ಬ್ರಾಹ್ಮಣರು ಮಾಡುವ ಹೋಮದಿಂದಲೂ ಒಳ್ಳೆಯ ಕೆರೆಗಳು ಹಂಸ ಚಕ್ರವಾಕ ಸಾರಸಪಕ್ಷಿಗಳ ಮಧುರವಾದ ಧ್ವನಿಯಿಂದಲೂ ಊರಿನ ಒಳಭಾಗವು ವೇದಘೋಷದಿಂದಲೂ ತುಂಬಿರಲು ದೇವತೆಗಳಿಂದ ಕಡೆಯಲ್ಪಟ್ಟ ಸಮುದ್ರದ ಘೋಷದಂತೆ ಅರಿಕೇಸರಿಯು ಧರ್ಮವಾಗಿ ಕೊಟ್ಟ ಧರ್ಮಪುರವು ಶಬ್ದಮಾಡುತ್ತ ಯಾವಾಗಲೂ ಬಹು ರಮಣೀಯವಾಗಿತ್ತು.
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy