SearchBrowseAboutContactDonate
Page Preview
Page 73
Loading...
Download File
Download File
Page Text
________________ ೬೮ / ಪಂಪಭಾರತಂ ಈ || ಚಂಡ ವಿರೋಧಿಸಾಧನ ತಮಸ್ತಮಮೋಡೆ ವಿಶಿಷ್ಟ ಪದಿನೀ ಪಂಡಮರಲ್ಲು ರಾಗದಿನೊಲ್ಲಿರೆ ಯಾಚಕ ಭಂಗಕೋಟಿ ಕೈ | ಕೊಂಡು ನಿರಂತರಂ ತಗುಳು ಕೀರ್ತಿಸಿ ಮಿಕೈಸೆವ ಪ್ರಚಂಡ ಮಾ ರ್ತಾಂಡನಲರ್ಚುಗೆನ್ನ ಹೃದಯಾಂಬುಜಮಂ ನಿಜ ವಾರೀಚಿಯಿಂ ಚಂ || ಸಹಜದ ಚೆಲ್ವಿನೊಳ್ ರತಿಯ ಸೋಲದ ಕೇಳಿಕೆಯೊಳ್ ಪೊದಟ್ಟು ಸ ನಿಹಿತವೆನಿಪ್ಪಪೂರ್ವ ಶುಭಲಕ್ಷಣ ದೇಹದೊಳೊಳನಾಳು ಸಂ | ದಹಿಕಟಕ ಪ್ರಸಾದದ ಮನೋಜನುಮಂ ಗೆಲೆವಂದನಾಗಳುಂ ಸಹಜಮನೋಜನೋಜನೆಮಗೀಗ ವಿಚಿತ್ರ ರತೋತ್ಸವಂಗಳಂ || & ಚಂ || ಕ್ಷಯಮಣಮಿಲ್ಲ ಕೇಟ್ಟು ಕಡೆಗಂಡವನಾವನುಮಿನಲ್ ತದ ಕ್ಷಯನಿಧಿ ತಾನೆ ತನ್ನನೊಸೆದೋಲಗಿಪಂಗರಿದಿಲ್ಲೆನಿಪ್ಪ ವಾ | ಜಯಮನಿತರ್ಕಮಂಬಿಕೆ ಸರಸ್ವತಿ ಮನ್ಮುಖಪದರಂಗದೇ ಬ್‌ಯನೆಡೆಗೊಂಡು ಕೊಂಡುಕೊನೆದೀಗರಿಗಂಗೆ ವಿಶುದ್ಧ ಬುದ್ಧಿಯಂ || ೫ ೩. ಕ್ರೂರಿಗಳಾದ ಶತ್ರುಸೈನ್ಯವೆಂಬ ಕತ್ತಲೆಯ ಮೊತ್ತವು ಓಡಿಹೋಗುತ್ತಿರುವ ವಿಶೇಷ ಗುಣಗಳಿಂದ ಕೂಡಿದ ತಾವರೆಯ ಸಮೂಹವು (ಅರಿಕೇಸರಿಯ ಪರವಾಗಿ ಪದಿನೀ ಜಾತಿಯ ಸ್ತ್ರೀಯರ ಸಮೂಹವು ಅರಳಿ ಪ್ರೀತಿಸಿ ಸಂತೋಷದಿಂದಿರಲು, ತಿರುಕನೆಂಬ ದುಂಬಿಗಳ ಸಮೂಹವು ತೃಪ್ತಿಯಿಂದ ಎಡಬಿಡದೆ ಹಿಂಬಾಲಿಸಿ ಹೊಗಳುತ್ತಿರಲು ಅತ್ಯಧಿಕವಾಗಿ ಪ್ರಕಾಶಿಸುತ್ತಿರುವ ಸೂರ್ಯನೂ ಪ್ರಚಂಡ ಮಾರ್ತಂಡನೆಂಬ ಬಿರುದಿನಿಂದ ಕೂಡಿದ ಅರಿಕೇಸಕರಿಯೂ ತಮ್ಮ ಮಾತೆಂಬ ಕಿರಣದಿಂದ ನನ್ನ ಹೃದಯಕಮಲವನ್ನು ಅರಳಿಸಲಿ, ೪. ತನ್ನ ಹುಟ್ಟಿನಿಂದಲೇ ಸಹಜವಾಗಿ ಬಂದ ಸೌಂದರ್ಯದಿಂದಲೂ ಎಂದೂ ಸೋಲದ ಸಂಭೋಗಕ್ರೀಡೆಯಿಂದಲೂ ಅಪೂರ್ವವಾದ ಶುಭಲಕ್ಷಣಗಳಿಂದ ಕೂಡಿದ ಶರೀರದ ವೈಭವದಿಂದಲೂ ಸರ್ಪಭೂಷಣನಾದ ಈಶ್ವರನ ಪ್ರಸಾದದಿಂದಲೂ ಕೂಡಿ ಸಹಜಮನ್ಮಥನಿಗೂ ಆಚಾರ್ಯನಾಗಿರುವ ಅರಿಕೇಸರಿಯು ಯಾವಾಗಲೂ ರಮಣೀಯವೂ ವೈವಿಧ್ಯಮಯವೂ ಆದ ಸುಖ ಸಂತೋಷಗಳನ್ನು ದಯಪಾಲಿಸಲಿ. (ಮನ್ಮಥನು ಶರೀರವಿಲ್ಲದವನು; ಈಶ್ವರನ ಕೋಪಕ್ಕೆ ಪಾತ್ರನಾದವನು; ರತಿಯ ಸಂಭೋಗಕ್ರೀಡೆಯಲ್ಲಿ ಸೀಮಿತನಾದವನು. ಅರಿಕೇಸರಿಯಾದರೋ ಸೌಂದರ್ಯದಿಂದ ಕೂಡಿದ ಶರೀರವುಳ್ಳವನೂ ಈಶ್ವರಾನುಗ್ರಹಕ್ಕೆ ಪಾತ್ರವಾದವನೂ ವಿವಿಧ ಸಂಭೋಗಕೇಳಿಯುಳ್ಳವನೂ ಆಗಿರುವುದರಿಂದ ಇವನು ಮನ್ಮಥನಿಗೂ ಆಚಾರ್ಯನಾಗಿದ್ದಾನೆ ಎಂಬುದು ಭಾವ) ೫. ಸ್ವಲ್ಪವೂ ನಾಶವಿಲ್ಲದ, ಯಾರಿಂದಲೂ ಅದರ ಕೊನೆಯನ್ನು ತಿಳಿಯುವುದಕ್ಕಾಗದ, ತನಗೆ ತಾನೆ ಅಕ್ಷಯನಿಧಿಯಾಗಿರುವ, ಅವಳನ್ನು ಸೇವಿಸಿದವರಿಗೆ ಅಸಾಧ್ಯವಾವುದೂ ಇಲ್ಲವೆನಿಸುವ, ಸಮಸ್ತ ವಾಹ್ಮಯಕ್ಕೂ ತಾಯಿಯಾದ ಸರಸ್ವತೀದೇವಿಯು ಕಮಲದಂತಿರುವ ಮುಖವೆಂಬ ರಂಗಸ್ಥಳದ ಏಳಿಗೆಯನ್ನೊಡಗೊಂಡು ಅರಿಕೇಸರಿಗೆ ಸಂತೋಷದಿಂದ ನಿಷ್ಕಲ್ಮಷವಾದ ಬುದ್ಧಿಯನ್ನು
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy