SearchBrowseAboutContactDonate
Page Preview
Page 86
Loading...
Download File
Download File
Page Text
________________ ಪ್ರಥಮಾಶ್ವಾಸಂ | ೮೧ ಬೆಳೆದಂಗಿರ್ದ ಕೆಲನೆ ಕೆಲ್ಯೂಲನಂ ಬಳಸಿರ್ದ ಪೂತ ಪೂ ಗೋಳಗಳ ಪೂತ ಪೂಗೊಳಗಳಂ ಬಳಸಿರ್ದ ವಿಚಿತ್ರ ನಂದನಾ | ವಳಿಗಳೆ ನಂದನಾವಳಿಗಳಂ ಬಳಸಿರ್ದ ಮದಾಳಿ ಸಂಕುಲಂ ಗಳೆ ವಿಷಯಾಂಗನಾಲುಳಿತ ಕುಂತಳದಂತವೊಲೊಪ್ಪಿ ತೋಜುಗುಂ ೫೩ ಚಂ || ಲಳಿತ ವಿಚಿತ್ರ ಪತ್ರ ಫಲ ಪುಷ್ಟಯುತಾಟವಿ ಸೊರ್ಕಿದಾನೆಯಂ ಚಳವುದು ದೇವಮಾತೃಕಮೆನಿಪ್ಪ ಪೊಲಂ ನವಗಂಧಶಾಳಿಯಂ | ಬೆಳೆವುದು ರಮ್ಮ ನಂದನ ವನಾಳಿ ವಿಯೋಗಿಜನಕ್ಕೆ ಬೇಟಮಂ ಬಳೆವುದು ನಾಡ ಕಾಡ ಬೆಳಸಿಂಬೆಳಸಾ ವಿಷಯಾಂತರಾಳದೊಳ್ || ೫೪ ಕ೦ll, ಆವಲರುಂ ಪಣುಂ ಬೀ ತೋವವು ಗಡ ಬೀಯವಲ್ಲಿ ಮಲ್ಲಿಗೆಗಳುಮಿ | - ಮಾವುಗಳುಮಂದೂಡಿನ್ ಪಟ ತಾವುದು ಸಂಸಾರ ಸಾರಸರ್ವಸ್ವ ಫಲಂ || ಮಿಡಿದೂಡ ತನಿಗರ್ವು ರಸಂ ಬಿಡುವುವು ಬರಿದೂಂದು ಮುಗುಳ ಕಂಪಿಳಿ ಮೊಗಂ | ಗಿಡುವುವು ತುಂಬಿಗಳುಮೆ ವಡುವುವು ಕುಡಿದೊಂದು ಸಣ್ಣ ರಸದೊಳೆ ಗಿಳಿಗಳ್ || ೫೬ ೫೫ ಸಂಪದ್ಭರಿತವಾಗಿದೆ ಎಂದು ಭಾವ. ೫೩. (ಆ ದೇಶದಲ್ಲಿ ಎಲ್ಲಿ ನೋಡಿದರೂ) ಬೆಳೆದ ತೆನೆಯ ಭಾರದಿಂದ ಬಾಗಿರುವ ಗದ್ದೆಗಳೇ, ಆ ಗದ್ದೆಗಳನ್ನು ಬಳಸಿಕೊಂಡಿರುವ ಹೂವಿನಿಂದ ಕೂಡಿರುವ ಕೊಳಗಳೇ, ಆ ಹೂಗೋಳಗಳ ಸುತ್ತಲಿರುವ ವಿಚಿತ್ರವಾದ ತೋಟದ ಸಮೂಹಗಳೇ. ಆ ತೋಟವನ್ನು ಆವರಿಸಿಕೊಂಡಿರುವ ಮದಿಸಿದ ದುಂಬಿಗಳ ಗುಂಪುಗಳ ಆ ದೇಶವೆಂಬ ಸ್ತ್ರೀಯ ವಕ್ರವಾದ ಮುಂಗುರುಳಿನಂತೆ ಕಾಣುತ್ತದೆ. ೫೪. ಆ ನಾಡಿನ ಒಳಭಾಗದಲ್ಲಿ ಸುಂದರವೂ ವಿವಿಧವೂ ಆದ ಎಲೆ ಹಣ್ಣು ಹೂವುಗಳಿಂದ ಕೂಡಿದ ಕಾಡು ಮದ್ದಾನೆಗಳನ್ನು ಬೆಳೆಸುತ್ತದೆ. ಮಳೆಯಿಂದಲೇ ಬೆಳೆಯುವ ಹೊಲಗಳು ಸುವಾಸನಾಯುಕ್ತವಾದ ಬತ್ತವನ್ನು ಬೆಳೆಸುತ್ತವೆ. ರಮ್ಯವಾದ ತೋಟದ ಸಾಲುಗಳು ವಿರಹಿಗಳಿಗೆ ಪ್ರೀತಿಯನ್ನು ಹೆಚ್ಚಿಸುತ್ತವೆ. ಆ ದೇಶದ ನಾಡಿನಲ್ಲಿಯೂ ಕಾಡಿನಲ್ಲಿಯೂ ಬೆಳೆಯುವ ಬೆಳಸು ಇನಿದಾದ ಬೆಳಸಾಗಿವೆ. ೫೫. (ಅಲ್ಲಿಯ) ಹೂವು ಹಣ್ಣು ಮಲ್ಲಿಗೆಗಳೂ ರಸಯುಕ್ತವಾದ ಮಾವುಗಳೂ ಎಂದೂ ಮುಗಿದುಹೋಗವು ಎಂದಮೇಲೆ ಸಂಸಾರಸಾರ ಸರ್ವಸ್ವಫಲ ಬೇರೆ ಯಾವುದಿದೆ? ೫೬, ಆ ನಾಡಿನ ರಸಯುಕ್ತವಾದ ಕಬ್ಬು ಬೆರಳಿನಿಂದ ಮಿಡಿದರೇ ರಸವನ್ನು ಚೆಲ್ಲುತ್ತದೆ. ದುಂಬಿಗಳು ಅರಳಿದ ಒಂದು ಹೂವಿನ ವಾಸನೆಯಿಂದಲೇ ತೃಪ್ತಿಹೊಂದಿ ಮುಖವನ್ನು ತಿರುಗಿಸುವುವು. ಗಿಳಿಗಳು ಒಂದು ಹಣ್ಣಿನ ರಸವನ್ನು ಕುಡಿಯುವುದರಿಂದಲೇ ಅಜೀರ್ಣವನ್ನು ಹೊಂದುವುವು. ಅಂದರೆ ಅಲ್ಲಿಯ ಕಬ್ಬು, ಹೂವು, ಹಣ್ಣು ರಸಯುಕ್ತವಾಗಿವೆ.
SR No.034022
Book TitleVikramarjuna Vijayam
Original Sutra AuthorN/A
AuthorPampa
PublisherKannada Sahitya Parishattu
Publication Year2016
Total Pages792
LanguageKannada
ClassificationBook_Other & Kavya
File Size139 MB
Copyright © Jain Education International. All rights reserved. | Privacy Policy