________________
ಚತುರ್ಥಾಶ್ವಾಸಂ | ೨೧೯ ಮll .ಸ ನೆಗಟೀ ಕರ್ಪೂರ ಕಾಳಾಗರು ಮಳಯ ಮಹೀಜಂಗಳೇಳಾ ಲತಾಳೀ |
ಸ್ಥಗಿತಂಗಳ್ ಕಣ್ಣೆವಂದಿರ್ದುವನಿವನೆ ವಲಂ ಕೊಂಬುಗೊಂಡಂಗಜಂ ಮೇ | ಲ್ಯಗೆ ಪಾರ್ದಾರ್ದಾಗಳುಂ ಕಿನ್ನರ ಯುವತಿ ಮೃಗೀವಾತಮಂ ತನ್ನ ನಲ್ಲಂ ಬುಗಳಿಂದೆಚ್ಚೆಚ್ಚು ಮೆಚ್ಚಂ ಸಲಿಸುವನದಟಿಂ ರಮ್ಯಮಂತೀ ನರೇಂದ್ರ 11೨೩
ಮll: ಇದಿರೊಳ್ ನಿಂದೊಡೆ ವಜಿ ಸೈರಿಸನಿರಲ್ವೇಡೆಮ್ಮೆಳೊಳ್ಳೋಕು ನಿ
ಲುದು ನೀನೆಂದು ಕಡಂಗಿ ಕಾಲಿಡಿವವೊಲ್ ತನೂ.ರ್ಮಿಗಳ ಬಂಧುವಂ | ದಿದಂ ಪೋದ ತಪೋಪಳಂ (?) ಗಗನಮಂ ಮಾರ್ಪೊಯ್ಕೆ ಕಸ್ತೂಪ್ಪಿ ತೋ ರ್ಪುದಿದುತ್ತೇಂಖದಸಂಖ್ಯ ಶಂಖ ಧವಳಂ ಗಂಭೀರ ನೀರಾಕರಂ || ೨೪
ಚಂtl.
ಚಳದನಿಳಾಹತ ಕ್ಷುಭಿತ ಭಂಗುರ ತುಂಗ ತರಂಗ ಮಾಳಿಕಾ ವಳನ ಸಮುಚ್ಚಳವಣಿಗಣಾತ್ತ ಮರೀಚಿ ಲತಾ ಪ್ರತಾನ ಸಂ | ವಳಯಿತ ವಿದ್ರುಮ ದ್ರುಮ ವಿಳಾಸ ವಿಶೇಷಿತ ಬಾಡವಾನಳಾ ವಿಳ ಜಳಮಂ ಮನಂ ಬಯಸಿ ನೋಡಿದನರ್ಣವಮಂ ಗುಣಾರ್ಣವಂ 11' ೨೫
ವ|| ಅಂತು ನೋಡುತ್ತುಂ ಬಂದು ಮುಂದೊಂದೆಡೆಯೊಳದಭ್ರಾಭ್ರವಿಭ್ರಮ ಭ್ರಾಜಿತೋತ್ತುಂಗಶೈಲಮಂ ಕಂಡು
ನಂದಿಸುತ್ತದೆ. ೨೩. ಏಲಕ್ಕಿ ಬಳ್ಳಿಗಳಿಂದ ವ್ಯಾಪ್ತವಾಗಿ ಪ್ರಸಿದ್ಧವಾಗಿರುವ ಇಲ್ಲಿಯ ಕರ್ಪೂರ, ಕರಿ ಅಗಿಲು, ಗಂಧದ ಮರಗಳು ಬಹು ರಮಣೀಯವಾಗಿವೆ. ಇದನ್ನೇ ಅಲ್ಲವೇ ಮನ್ಮಥನು ತನ್ನ ಸಂಕೇತಸ್ಥಳವನ್ನಾಗಿ ಮಾಡಿಕೊಂಡು ಮೃದುವಾಗಿ ನೋಡಿ ಆರ್ಭಟಿಸಿ ಕಿನ್ನರಯುವತಿಯೆಂಬ ಜಿಂಕೆಯ ಸಮೂಹವನ್ನು ಯಾವಾಗಲೂ ತನ್ನ ಉತ್ತಮ ಬಾಣಗಳಿಂದ ಹೊಡೆದು ಅವರ ಇಷ್ಟಾರ್ಥವನ್ನು ಸಲ್ಲಿಸುತ್ತಾನೆ. ಆದುದರಿಂದ ಈ ಪರ್ವತಶ್ರೇಷ್ಠವು ರಮಣೀಯವಾಗಿದೆ. ೨೪. ನೀನು ಎದುರುಗಡೆ ನಿಂತರೆ ಇಂದ್ರನು ಸೈರಿಸುವುದಿಲ್ಲ. ಇಲ್ಲಿರಬೇಡ; ನಮ್ಮೊಳಗೆ ಪ್ರವೇಶ ಮಾಡಿ ನಿಲ್ಲತಕ್ಕದ್ದು ಎಂದು ಉತ್ಸಾಹದಿಂದ ಕಾಲನ್ನು ಹಿಡಿಯುವ ಹಾಗೆ ಸಮುದ್ರದ ಅಲೆಗಳು ಪಕ್ಕದಲ್ಲಿರುವ ಪರ್ವತಗಳ ಬುಡವನ್ನು ಆಶ್ರಯಿಸಿವೆ. ಇಲ್ಲಿಂದ ಹೋದ ತಪೋಪಳವು (?) ಗಮನವನ್ನು ಪ್ರತಿಭಟಿಸಲು ಮೇಲೆ ತೇಲುತ್ತಿರುವ ಅಸಂಖ್ಯಾತವಾದ ಶಂಖಗಳಿಂದ ಬೆಳ್ಳಗಿರುವ ಗಂಭೀರವಾದ ಸಮುದ್ರವು ಕಣ್ಣಿಗೆ ಒಪ್ಪಿ ತೋರಿತು. ೨೫. ಚಲಿಸುತ್ತಿರುವ ಗಾಳಿಯ ಹೊಡೆತದಿಂದ ಕದಡಿದುದೂ ಅಸ್ಥಿರವೂ ಎತ್ತರವೂ ಆದ ಅಲೆಗಳ ಹೊರಳಿಕೆಯಿಂದ ಚಂಚಲವಾದುದು. ಮೇಲಕ್ಕೆ ಚಿಮ್ಮಿದ ರತ್ನಕಾಂತಿ ಗಳಿಂದ ಕೂಡಿದುದೂ ಹವಳದ ಬಳ್ಳಿಗಳ ಸೊಗಸಿನಿಂದ ವಿಶಿಷ್ಟವಾಗಿ ಮಾಡಲ್ಪಟ್ಟುದೂ ಬಡಬಾಗ್ನಿಯ ಬೆಂಕಿಯಿಂದ ಕದಡಲ್ಪಟ್ಟ ನೀರುಳ್ಳದೂ ಆದ ಸಮುದ್ರವನ್ನು ಗುಣಾರ್ಣವನಾದ ಅರ್ಜುನನು ತೃಪ್ತಿಯಿಂದ ನೋಡಿದನು. ವll ಹಾಗೆ ನೋಡುತ್ತ ಬಂದು ಮುಂಭಾಗದಲ್ಲಿ ಅತಿಶಯವಾದ ಮೋಡಗಳ ವಿಲಾಸದಿಂದ ಪ್ರಕಾಶಿತವಾದ