Book Title: Vikramarjuna Vijayam
Author(s): Pampa
Publisher: Kannada Sahitya Parishattu
View full book text
________________
೬೯೮ / ಪಂಪಭಾರತಂ ನಟ್ಟು ನಿಲ್ಕುದಲಿಂ ಸಮರೈಕಮೇರುವುಂ ಗೊಜ್ಜಿಗನೆಂಬ ಸಕಳ ಚಕ್ರವರ್ತಿ ಮುಳಿಯ ತನಗೆ ಶರಣಾಗತನಾದ ವಿಜಯಾದಿತನಂ ಕಾದ ಬಾಳನದೋಳ್ ಶರಣಾಗತ ಜಳನಿಧಿಯುಂ ವಿನಯಮೇ ತನಗೆ ಭೂಷಣಮಾಗೆ ಮಾಡುವುದಂ ವಿನಯ ಭೂಷಣನುಂ ಲೋಕಕ್ಕೆಲ್ಲಮಸಾಧಾರಣಮಪ್ಪ ದಾನಗುಣದೊಳ ಲೋಕೈಕಕಲ್ಪದ್ರುಮನುಂ ಎನಿತಾನುಂ ಗಜಗಮನಂಗಳಂ ತಾನೆ ಸಮದನಪ್ಪುದಂ ಗಜಗಮನರಾಜಪುತ್ರನುಂ ಎಂತಪ್ಪ ಗರ್ವವ್ಯಾಳಿಯುಮನತಿವರ್ತಿಗಳುಮನಾರೂಢದೊಳ್ ತನಗಳವಡುವುದಲಿಂದಾರೂಢ ಸರ್ವಜ್ಞನುಂ ಪರಮಾತ್ಮನಂತೆ ಲೋಕಾಲೋಕದ ವಸ್ತುಗಳುಮಂ ಕರತಳಾಮಳಕವಾಗುವುದರಿಂ ನೃಪ ಪರಮಾತ್ಮನುಂ ಎಂತಪ್ಪ ಪಂಡಿತರ ಗೋಷ್ಠಿಯೊಳಂ ತಾನೆ ಸೊಗಯಿಸುವುದು ವಿಬುದ ವನಜವನಕಳಹಸನುಂ ಕೆಯಯದೆ ಸೊಗಯಿಸುವನಪದ ಸಹಜಮನೋಜನುಂ ಎಂತಪ್ಪ ಬರ್ದೆಯರುಮಂ ಬಗೆಗೆ ವರಿಸುವ ತಕ್ಕಿಲ್ ಸುರತಮಕರಧ್ವಜನುಂ ಕೂರ್ಪ ಕೂರದರ ಪಡೆಗಳೆರಡುಂ ತನ್ನನೆ ಮೆಚ್ಚುವುದುಂ ಪಡೆಮಚ್ಚೆಗಂಡನುಂ ಎಂತಪ್ಪ ಮಾರ್ವಲಂಗಳುಮಂ ನೋಡುತ್ತ ಗೆಲ್ಲುದಂ ನೋಡುತ್ತೆ ಗೆಲ್ಯನುಂ ಮಹಾ ಭಾರಾವತಾರದೊಳತಿರಥ ಮಹಾರಥ ಸಮರರ್ಥಾರ್ಧರಥರ್ಕಳಂ ಪಡಲ್ವಡಿಸುವುದeಂ ಸಾಹಸಾರ್ಜುನನುಮಮರೇಂದ್ರನೊಳರ್ಧಾಸನಮತದ ಮಹಾ ಮಹಿಮೆಯೊಳ್ ಮಹಿಮಾರ್ಣವನುಮರಿಕರಿಗಳಂ ಪಡಲ್ವಡಿಸುವ ಬೀರದೊಳರಿ ಕೇಸರಿಯುಮಾಗಿ
ಅಂಗೀಕರಿಸುವುದರಿಂದ ಪರಾಕ್ರಮಧವಳನೂ ಎಂತಹ ಯುದ್ದದಲ್ಲಿಯೂ ಬಿಟ್ಟುಹೋಗದೆ ಸ್ಥಿರವಾಗಿ ನಿಲ್ಲುವುದರಿಂದ ಸಮರೈಕಮೇರುವೂ ಗೊಜ್ಜಿಗನೆಂಬ ಸಕಳಚಕ್ರವರ್ತಿಯ ಕೋಪಕ್ಕೆ ಪಾತ್ರನಾದ ವಿಜಯಾದಿತ್ಯನನ್ನು ರಕ್ಷಿಸಿದ ಪರಾಕ್ರಮದಿಂದ (ರಕ್ಷಿಸಿದುದರಿಂದ) ಶರಣಾಗತಜಳನಿಧಿಯೂ ವಿನಯವನ್ನೇ ತನಗೆ ಒಡವೆಯನ್ನಾಗಿ ಮಾಡಿಕೊಂಡಿರುವುದರಿಂದ ವಿನಯಭೂಷಣನೂ ಲೋಕಕ್ಕೆಲ್ಲ ಅಸಾಧಾರಣ ರೀತಿಯದಾಗಿರುವ ದಾನಗುಣದಿಂದ ಲೋಕೈಕ ಕಲ್ಪದ್ರುಮನೂ ಎಷ್ಟೋ ಗಜಶಾಸ್ತ್ರಗಳನ್ನು ತಾನೆ ರಚಿಸಿರುವುದರಿಂದ ಗಜಾಗಮ ರಾಜಪುತ್ರನೂ ಎಂತಹ ಮದ್ದಾನೆಯನ್ನೂ ವಶಕ್ಕೆ ಬರದೇ ಇರುವ ತುಂಟಾನೆಗಳನ್ನೂ ಹತ್ತುವುದರಲ್ಲಿ ಸಮರ್ಥನಾಗಿರುವುದರಿಂದ ಆರೂಢಸರ್ವಜ್ಞನೂ ಪರಮಾತ್ಮನ ಹಾಗೆ ಲೋಕಾಲೋಕ ವಸ್ತುಗಳನ್ನು ಕಯ್ಯಲ್ಲಿರುವ ನೆಲ್ಲಿಯಕಾಯಿನಂತೆ ತಿಳಿದಿರುವುದರಿಂದ ನೃಪಪರಮಾತ್ಮನೂ ಎಂತಹ ವಿದ್ವಾಂಸರ ಸಮೂಹದಲ್ಲಿಯೂ ತಾನೇ ಪ್ರಕಾಶಮಾನವಾಗಿರುವುದರಿಂದ ವಿಬುಧವನಜವನಕಳಹಂಸನೂ ಅಲಂಕಾರಮಾಡಿಕೊಳ್ಳದೆಯೇ ಸುಂದರ ನಾಗಿರುವುದರಿಂದ ಸಹಜಮನೋಜನೂ ಎಂತಹ ಪ್ರೌಢಸ್ತ್ರೀಯರನ್ನೂ ತನ್ನಲ್ಲಿ ಪ್ರೀತಿಮಾಡುವ ಹಾಗೆ ಮಾಡುವ ಯೋಗ್ಯತೆಯಿಂದ ಸುರತಮಕರಧ್ವಜನೂ ಪ್ರೀತಿಸುವ ಮತ್ತು ಪ್ರೀತಿಸದಿರುವ ಎರಡುಸೆನ್ಯಗಳೂ ತನ್ನನ್ನು ಮೆಚ್ಚುವುದರಿಂದ ಪಡೆಮೆಚ್ಚೆಗಂಡನೂ ಎಂತಹ ಪ್ರತಿಸೈನ್ಯವನ್ನೂ ನೋಡುವುದರಿಂದಲೇ ಗೆಲ್ಲುವುದರಿಂದ ನೋಡುತ್ತೆ ಗೆಲ್ಬನೂ ಮಹಾಭಾರತ ಯುದ್ಧದಲ್ಲಿ ಅತಿರಥ ಸಮರಥ ಅರ್ಧರಥರುಗಳನ್ನೂ ಕೆಳಗೆ ಬೀಳುವ ಹಾಗೆ ಮಾಡುವುದರಿಂದ ಸಾಹಸಾರ್ಜುನನೂ ದೇವೇಂದ್ರನೊಡನೆ ಅರ್ಧಾಸನವನ್ನು ಹತ್ತಿದ ಮಹಾಮಹಿಮೆಯಿಂದ ಮಹಿಮಾರ್ಣವನೂ ಶತ್ರುಗಳ ಆನೆಗಳನ್ನು

Page Navigation
1 ... 701 702 703 704 705 706 707 708 709 710 711 712 713 714 715 716 717 718 719 720 721 722 723 724 725 726 727 728 729 730 731 732 733 734 735 736 737 738 739 740 741 742 743 744 745 746 747 748 749 750 751 752 753 754 755 756 757 758 759 760 761 762 763 764 765 766 767 768 769 770 771 772 773 774 775 776 777 778 779 780 781 782 783 784 785 786 787 788 789 790 791 792